Ramalinga Reddy ಮನವೊಲಿಸುವಲ್ಲಿ ಸಫಲ, ಸಚಿವ ಸ್ಥಾನಕ್ಕೆ ಕೊಟ್ಟ ರಾಜೀನಾಮೆ ವಾಪಸ್ – ಸುರ್ಜೇವಾಲ

ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅಸಮಾಧಾನಗೊಂಡ ಸಚಿವ ಸ್ಥಾನಕ್ಕೆ ನಿನ್ನೆ ರಾಮಲಿಂಗಾರೆಡ್ಡಿ ರಾಜೇನಾಮೆ ನೀಡಿದ್ದರು.

ಸುರ್ಜೆವಾಲಾ ಮನವೊಲಿಕೆ ಸಫಲ
ಇಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಜೊತೆಗೆ ರಾಮಲಿಂಗರೆಡ್ಡಿ ಸುಧೀರ್ಘವಾಗಿ ಚರ್ಚೆ ನಡೆಸಿದರು. ಚರ್ಚೆ ಬಳಿಕ ಸುರ್ಜೆವಾಲಾ ರಾಮಲಿಂಗ ರೆಡ್ಡಿ ರಾಜೀನಾಮೆ ವಾಪಸ್ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.
ಇದನ್ನು ಓದಿ : ರಾಜೀನಾಮೆ ಹಿಂಪಡೆಯಲು CM, ಸುರ್ಜೆವಾಲಾ ಮನವಿ ಮಾಡಿದ್ದಾರೆ – ರಾಮಲಿಂಗಾರೆಡ್ಡಿ

ಸಚಿವ ಸ್ಥಾನಕ್ಕೆ ಕೊಟ್ಟ ರಾಜೀನಾಮೆ ವಾಪಸ್
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ರಾಮಲಿಂಗಾರೆಡ್ಡಿ ಅವರೊಂದಿಗೆ ಮಹತ್ವದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲ, ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಅವರು ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಹಿಂಪಡೆದಿದ್ದಾರೆ. ಸಚಿವ ಸಂಪುಟದಲ್ಲಿ ಮುಂದುವರಿದು ಕೆಲಸ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನು ನೋಡಿ : ನೊಣವಿನಕೆರೆಗೆ ಇಂದು CM DKS ಭೇಟಿ – CM ಭೇಟಿ ಹಿನ್ನಲೆ ಬೀದಿಬದಿ ವ್ಯಾಪಾರಿಗಳ ತೆರವು.!




