
DEEPAVALI : ದಿಲ್ಲಿಯಲ್ಲಿ 2 ದಿನ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅಸ್ತು – ನ.9 ರಿಂದ ಮತ್ತೆ ಸಂಪೂರ್ಣ ನಿಷೇಧ
ಬೆಳಕಿನ ಹಬ್ಬ ದೀಪಾವಳಿಗೆ ಕೌಂಟ್ಡೌನ್ ಶುರುವಾಗಿದೆ. ದೀಪಾವಳಿ ಅಂದಾಕ್ಷಣ ನೆನಪಾಗೋದು ಪಟಾಕಿಗಳು. ಆದ್ರೆ ವಾಯುಮಾಲಿನ್ಯದ ಆತಂಕದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಕೆಲವು ನಿರ್ಬಂಧಗಳೊಂದಿಗೆ ಅನುಮತಿ ನೀಡಿದೆ. ಹಸಿರು ಪಟಾಕಿಗಳನ್ನು ನಿಗದಿತ ಎರಡು ದಿನಗಳು ಹಾಗೂ ನಿರ್ದಿಷ್ಟ ಸಮಯದಲ್ಲಿ ಮಾತ್ರ ಸಿಡಿಸಲು ಅವಕಾಶ ಕಲ್ಪಿಸಲಾಗಿದೆ.
ಹಸಿರು ಪಟಾಕಿ ಸಿಡಿಸಲು ಅಸ್ತು
ಹೌದು.. ನವೆಂಬರ್ 7 ಮತ್ತು 8ರಂದು ದೆಹಲಿ ಹಾಗೂ ಎನ್ಸಿಆರ್ ಪ್ರದೇಶಗಳಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅನುಮತಿ ನೀಡಲಾಗಿದೆ. ಬೆಳಗ್ಗೆ 6ರಿಂದ 7ರವರೆಗೆ ಹಾಗೂ ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಬಹುದು. ಈ ಆದೇಶವನ್ನು ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ಪ್ರಸನ್ನ ಬಿ. ವರಾಲೆ ಅವರನ್ನೊಳಗೊಂಡ ನ್ಯಾಯಪೀಠ ನೀಡಿದೆ. ನವೆಂಬರ್ 9ರಿಂದ ಹಸಿರು ಪಟಾಕಿಗಳ ಮೇಲಿನ ಸಂಪೂರ್ಣ ನಿಷೇಧ ಮತ್ತೆ ಜಾರಿಗೆ ಬರಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
READ THIS : WhatsApp ಮೆಟಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ತರಾಟೆ.!

ನಿಷೇಧದ ನಡುವೆಯೂ ಪಟಾಕಿ ಮಾರಾಟ
ಇನ್ನು ದೆಹಲಿ-ಎನ್ಸಿಆರ್ನಲ್ಲಿ ವಾಯುಮಾಲಿನ್ಯ ತಡೆಯಲು ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧ ಹೇರುವುದು ಮಾತ್ರ ಪರಿಣಾಮಕಾರಿ ಪರಿಹಾರವಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಈ ಹಿಂದೆ ಸಂಪೂರ್ಣ ನಿಷೇಧ ಜಾರಿಯಲ್ಲಿದ್ದರೂ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಾಗಿಲ್ಲ ಎಂಬುದನ್ನೂ ನ್ಯಾಯಾಲಯ ಗಮನಿಸಿದೆ.
ಆಸ್ಪತ್ರೆ, ವೃದ್ಧಾಶ್ರಮಗಳ 300 ಮೀಟರ್ ವ್ಯಾಪ್ತಿಯಲ್ಲಿ ನಿಷೇಧ
ಇನ್ನು ಆಸ್ಪತ್ರೆಗಳು, ನರ್ಸಿಂಗ್ ಹೋಮ್ಗಳು, ಆರೋಗ್ಯ ಕೇಂದ್ರಗಳು, ವೃದ್ಧಾಶ್ರಮಗಳು ಹಾಗೂ ಗುರುತಿಸಲಾದ ಶಾಂತ ವಲಯಗಳ 300 ಮೀಟರ್ ವ್ಯಾಪ್ತಿಯಲ್ಲಿ ಹಸಿರು ಪಟಾಕಿ ಸಿಡಿಸುವಂತಿಲ್ಲ.
ಶಾಲೆಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳ ಸಮೀಪದಲ್ಲೂ ಈ ನಿರ್ಬಂಧ ಮುಂದುವರಿಯಲಿದೆ. ಇಂತಹ ಸ್ಥಳಗಳನ್ನು ಪಟಾಕಿ ರಹಿತ ವಲಯಗಳೆಂದು ಗುರುತಿಸಲಾಗಿದೆ.

ನಿಗದಿತ ಅಂಗಡಿಗಳಲ್ಲಿ ಮಾತ್ರ ಹಸಿರು ಪಟಾಕಿ ಮಾರಾಟ
ಪಟಾಕಿ ಮಾರಾಟಕ್ಕೂ ನ್ಯಾಯಾಲಯ ನಿರ್ಬಂಧ ವಿಧಿಸಿದೆ. ದೆಹಲಿ-ಎನ್ಸಿಆರ್ನಲ್ಲಿ ಹಸಿರು ಪಟಾಕಿಗಳನ್ನು ನಿಗದಿಪಡಿಸಿದ ಅಂಗಡಿಗಳಲ್ಲಿ ಮಾತ್ರ ಮಾರಾಟ ಮಾಡಬೇಕು.
ಆನ್ಲೈನ್ ಮೂಲಕ ಪಟಾಕಿ ಮಾರಾಟಕ್ಕೆ ಅವಕಾಶವಿಲ್ಲ. ನಿಯಮಗಳ ಉಲ್ಲಂಘನೆಯಾಗದಂತೆ ನಿಗಾ ವಹಿಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.
MUST WATCH : ಅಖಾಡದಲ್ಲಿ ಶಿವಲಿಂಗೇಗೌಡ್ರ ಖದರ್… ತೋಳು ತಟ್ಟಿ ಕುಸ್ತಿಪಟುಗಳಿಗೆ ಜೋಶ್





