AICC ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ Suraj Hedge ನಿಧನ – ಗಣ್ಯರ ಸಂತಾಪ

ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ, ಮಾಜಿ ಸಿಎಂ ದೇವರಾಜ ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ ಅವರು ನಿಧನರಾಗಿದ್ದಾರೆ. ನೆನ್ನೆ ರಾತ್ರಿ ಹೃದಯಾಘಾತದಿಂದ Suraj Hegde ಅವರು ಕೊನೆಯುಸಿರೆಳೆದಿದ್ದಾರೆ.
ತಮಿಳುನಾಡು, ಪುದುಚೇರಿ ರಾಜ್ಯಗಳ ಉಸ್ತುವಾರಿಯಾಗಿ ಕಾರ್ಯನಿರ್ವಹಿದ್ದರು
ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಮೊಮ್ಮಗರಾದ ಸೂರಜ್ ಹೆಗ್ಡೆ, ಕಾಂಗ್ರೆಸ್ ಸಂಘಟನೆಯಲ್ಲಿ ಹಲವು ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಎಐಸಿಸಿ ಕಾರ್ಯದರ್ಶಿಯಾಗಿ ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಲ್ಲದೆ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಂಘಟನೆಯ ಮೂಲಕ ರಾಜಕೀಯ ಪ್ರವೇಶಿಸಿ ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದರು.
ಇದನ್ನು ಓದಿ : CM DK ಶಿವಕುಮಾರ್ ಮನೆ ಬಳಿ ವಾಮಾಚಾರ.!

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ
ಸಾಮಾಜಿಕ ನ್ಯಾಯ, ಹಿಂದುಳಿದ ವರ್ಗಗಳ ಅಭಿವೃದ್ಧಿ ಹಾಗೂ ಕಾರ್ಮಿಕರ ಹಕ್ಕುಗಳ ಪರವಾಗಿ ಧ್ವನಿಯಾಗಿದ್ದ ಸೂರಜ್ ಹೆಗ್ಡೆ, ತಮ್ಮ ತಾತ ದೇವರಾಜ ಅರಸು ಅವರ ಆದರ್ಶಗಳನ್ನು ಮುಂದುವರಿಸಿಕೊಂಡು ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದರು. ಪ್ರಸ್ತುತ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.

Suraj Hegde ನಿಧನ – ಗಣ್ಯರು ಸಂತಾಪ
ಸೂರಜ್ ಹೆಗ್ಡೆ ಅವರ ಅಗಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ರಾಜಕೀಯ ನಾಯಕರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದು, ಅವರ ಸೇವೆಯನ್ನು ಸ್ಮರಿಸಿದ್ದಾರೆ.

ಇದನ್ನು ನೋಡಿ : ಕನಕಪುರದಲ್ಲಿ ಡಿಕೆಶಿ ಭರ್ಜರಿ ರೋಡ್ ಶೋ- ಬೃಹತ್ ಹೂವು, ಹಣ್ಣಿನ ಹಾರ ಹಾಕಿ ಅದ್ಧೂರಿ ಸ್ವಾಗತ




