Suraj Hegde ನಿಧನ – ಅಂತಿಮ ನಮನ ಸಲ್ಲಿಸಿದ ರಾಹುಲ್ ಗಾಂಧಿ

ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿದ್ದ Suraj Hegde ಅವರ ನಿಧನಕ್ಕೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನಲ್ಲಿ ಅಂತಿಮ ನಮನ ಸಲ್ಲಿಸಿದ್ದಾರೆ.
ಸೂರಜ್ ಹೆಗ್ಡೆ ನಿಧನಕ್ಕೆ ಕಾಂಗ್ರೆಸ್ ನಾಯಕರಿಂದ ಭಾವುಕ ನಮನ
ದೆಹಲಿಯಿಂದ ಇಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ, ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಸೂರಜ್ ಹೆಗ್ಡೆ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರಾಹುಲ್ ಗಾಂಧಿ ಅವರಿಗೆ ಸಾಥ್ ನೀಡಿದರು.

ಹೃದಯಾಘಾತದಿಂದ ನಿಧನ
ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಮೊಮ್ಮಗನಾಗಿದ್ದ ಸೂರಜ್ ಹೆಗ್ಡೆ ಅವರಿಗೆ ಜೂನ್ 7 ರಂದು ಹೃದಯಾಘಾತ ಸಂಭವಿಸಿತು. ತಕ್ಷಣ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.
ಇದನ್ನು ಓದಿ : ಮಾಜಿ ಸಿಎಂ ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನ

ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ್ದರು
ಕಾಂಗ್ರೆಸ್ ಪಕ್ಷದಲ್ಲಿ ಹಲವು ಮಹತ್ವದ ಹುದ್ದೆಗಳನ್ನು ನಿರ್ವಹಿಸಿದ್ದ ಸೂರಜ್ ಹೆಗ್ಡೆ, ಎಐಸಿಸಿ ಕಾರ್ಯದರ್ಶಿ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ತಮಿಳುನಾಡು ಮತ್ತು ಪುದುಚೇರಿ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದರು. ಹಿಂದುಳಿದ ವರ್ಗಗಳ ಅಭಿವೃದ್ಧಿ, ಕಾರ್ಮಿಕರ ಹಕ್ಕುಗಳ ರಕ್ಷಣೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಅವರು ನಿರಂತರವಾಗಿ ಶ್ರಮಿಸಿದ್ದರು.

Suraj Hegde ನಿಧನ – ಗಣ್ಯರಿಂದ ಸಂತಾಪ
ಸೂರಜ್ ಹೆಗ್ಡೆ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇದನ್ನು ನೋಡಿ : ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಬಗ್ಗೆ ತುಮಕೂರಿನ ಸ್ಟೂಡೆಂಟ್ಸ್ ಏನಂದ್ರು ಗೊತ್ತಾ?





