ಕ್ರಿಕೆಟಿಗ Suryakumar Yadav ಹಾಗೂ ದೇವಿಶಾ ದಂಪತಿಗೆ ಮುದ್ದಾದ ಹೆಣ್ಣು ಮಗು ಜನನ.

ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಅವರ ಪತ್ನಿ ದೇವಿಶಾ ಶೆಟ್ಟಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ . ಇನ್ನು ಈ ಕುರಿತು ಸೂರ್ಯಕುಮಾರ್ ಯಾದವ್ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.

ನಮ್ಮ ಪುಟ್ಟ ರಾಜಕುಮಾರಿಯನ್ನು ಸ್ವಾಗತಿಸಿದ್ದೇವೆ
“ನಗು, ಸಂತೋಷ ಮತ್ತು ಕನಸುಗಳೊಂದಿಗೆ ನಮ್ಮ ಪುಟ್ಟ ರಾಜಕುಮಾರಿಯನ್ನು ಸ್ವಾಗತಿಸಿದ್ದೇವೆ” ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಹಾಗೂ ಕ್ರಿಕೆಟ್ ವಲಯದ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
READ THIS : ಸಿಎಂ ಸಿದ್ದುನ ಭೇಟಿಯಾದ ಸಮರ್ಥ್ ಶಾಮನೂರು

ಮುದ್ದಾದ ಹೆಣ್ಣು ಮಗು ಜನನ
ಕಾಲೇಜು ದಿನಗಳಲ್ಲಿ ಪರಿಚಯವಾಗಿ ಪ್ರೀತಿಯಲ್ಲಿ ಬಿದ್ದಿದ್ದ ಈ ಜೋಡಿ 2016ರಲ್ಲಿ ವಿವಾಹವಾಗಿದ್ದರು. ಮದುವೆಯಾಗಿ ಸುಮಾರು 10 ವರ್ಷಗಳ ಬಳಿಕ ಈ ದಂಪತಿ ತಮ್ಮ ಮೊದಲ ಮಗುವಿಗೆ ಸ್ವಾಗತ ಕೋರಿದ್ದಾರೆ.

ಮುದ್ದಾದ ಹೆಣ್ಣು ಮಗು ಜನನ
Suryakumar Yadav ಗೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ. ಸೂರ್ಯ ಅವರ ಮಡದಿ ದೇವಿಶಾ ಶೆಟ್ಟಿ ಕರ್ನಾಟಕದ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಲದವರು. ಇವರ ಕುಟುಂಬ ಸದ್ಯ ಮುಂಬೈನಲ್ಲಿ ವಾಸವಾಗಿದೆ.

MUST WATCH : ನಾಳೆ TURUVEKEREಗೆ ದಳಪತಿ ಎಂಟ್ರಿ – HDK ಆಗಮನದ ಹಿಂದಿದ್ಯಾ ಪಕ್ಷ ಸಂಘಟನೆ?




