Dharwad ಜಿಲ್ಲೆಯ ನವಲಗುಂದ ಸಮೀಪದ ವಿದ್ಯಾಜ್ಯೋತಿ ವಸತಿ ಶಾಲೆಯಲ್ಲಿ 10 ವರ್ಷದ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ.

Dharwad ಜಿಲ್ಲೆಯ ನವಲಗುಂದ ತಾಲೂಕಿನ ಅಣ್ಣಿಗೇರಿ ರಸ್ತೆಯಲ್ಲಿರುವ ವಿದ್ಯಾಜ್ಯೋತಿ ವಸತಿ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಶ್ರಾವಣವಾಡ ಗ್ರಾಮದ ಆಕಾಶ ನೀಲಣ್ಣನವರ (10) ಎಂದು ಗುರುತಿಸಲಾಗಿದೆ. ಸುಮಾರು 10 ದಿನಗಳ ಹಿಂದಷ್ಟೇ ಆತನನ್ನು ಪೋಷಕರು ವಸತಿ ಶಾಲೆಗೆ ಸೇರಿಸಿದ್ದರು.
ಶಾಲಾ ಸಿಬ್ಬಂದಿ ನೀಡಿದ ಮಾಹಿತಿಯ ಪ್ರಕಾರ, ಇಂದು ಮುಂಜಾನೆ ಆಕಾಶ್ ಕಾಂಪೌಂಡ್ ಮೇಲಿಂದ ಬಿದ್ದಿದ್ದಾನೆ ಎಂದು ಪೋಷಕರಿಗೆ ತಿಳಿಸಿ, ನವಲಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆಯೇ ಆಕಾಶ್ ಮೃತಪಟ್ಟಿದ್ದಾನೆ.
MUST READ : Guru Pushya Mahayoga : ಈ 6 ರಾಶಿಗಳಿಗೆ ಅದೃಷ್ಟ, ಧನಲಾಭ ಮತ್ತು ಯಶಸ್ಸಿನ ಸುರಿಮಳೆ..!!

ಮಗನ ಸಾವಿನ ಬಗ್ಗೆ ತಂದೆ ವಸಂತ್ ಅನುಮಾನ ವ್ಯಕ್ತಪಡಿಸಿದ್ದು, ನಿನ್ನೆ ದೂರವಾಣಿ ಕರೆ ವೇಳೆ ಶಿಕ್ಷಕರು ಹೊಡೆದಿದ್ದಾರೆ ಎಂದು ಆಕಾಶ್ ಹೇಳಿದ್ದಾನೆ ಎಂದು ಆರೋಪಿಸಿದ್ದಾರೆ. “ಕಾಂಪೌಂಡ್ ಮೇಲಿಂದ ಬಿದ್ದರೆ ಇಂತಹ ಸಾವು ಸಂಭವಿಸುವುದಿಲ್ಲ. ನನ್ನ ಮಗ ನಿಜವಾಗಿಯೂ ಎಲ್ಲಿಂದ ಬಿದ್ದಿದ್ದಾನೆ ಎಂಬುದು ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದ ಬಳಿಕವೇ ಗೊತ್ತಾಗಲಿದೆ” ಎಂದು ಅವರು ಹೇಳಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನವಲಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದ್ದು, ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಸೂಚನೆ: ಪೋಷಕರು ಮಾಡಿರುವ ಆರೋಪಗಳು ತನಿಖೆಯ ಹಂತದಲ್ಲಿದ್ದು, ಪ್ರಕರಣದ ನಿಖರ ಸತ್ಯಾಂಶವು ಅಧಿಕೃತ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ.
MUST WATCH : ಸರ್ಕಾರದ ವಿರುದ್ಧ ಸಿಡಿದೆದ್ದ ರೈತರು – HIGHWAY ತಡೆದು ಅನ್ನದಾತರ ಆಕ್ರೋಶ.! | CHIKKABALLAPURA NEWS |




