
Hassan : ಸ್ನೇಹಿತರ ಜೊತೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್ನಲ್ಲಿ ಅನುಮಾನಾಸ್ಪದ ಸಾವು
ಲಾಡ್ಜ್ನಲ್ಲಿ ಯುವತಿಯೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ Hassan ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಬೆಂಗಳೂರಿನ ನಾಗಸಂದ್ರ ನಿವಾಸಿ ವರ್ಷ (23) ಎಂದು ಗುರುತಿಸಲಾಗಿದೆ.
ಸ್ನೇಹಿತರ ಜೊತೆ ಟ್ರಿಪ್ಗೆ ಹೋಗಿದ್ದ ಯುವತಿ
ವರ್ಷ, ಶುಕ್ರವಾರ ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಅವರೊಂದಿಗೆ ಪ್ರವಾಸಕ್ಕಾಗಿ ಸಕಲೇಶಪುರಕ್ಕೆ ಹೋಗಿದ್ದಳು. ಮೂವರು ಶನಿವಾರ, ಭಾನುವಾರ ಹಾಗೂ ಸೋಮವಾರ ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಫಾಲ್ಸ್ ಸೇರಿದಂತೆ ಸಕಲೇಶಪುರ ತಾಲೂಕಿನ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದರು. ಅಲ್ಲದೇ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್ನಲ್ಲಿ ಒಂದೇ ರೂಂನಲ್ಲಿ ಮೂವರು ತಂಗಿದ್ದರು.
READ THIS : Bangalore ನಲ್ಲಿ ವಿವಾಹಿತೆಯ ಅನುಮಾನಾಸ್ಪದ ಸಾವು..!!

Hassan – ಯುವತಿ ಅನುಮಾನಾಸ್ಪದ ಸಾವು!
ಮಂಗಳವಾರ ಲಾಡ್ಜ್ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಕೂಡಲೇ ರಘು ಹಾಗೂ ದರ್ಶನ್ ವರ್ಷಳನ್ನು ಸಕಲೇಶಪುರ ತಾಲೂಕು ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವರ್ಷ ಸಾವಿಗೆ ನಿಖರ ಕಾರಣವೇನು?
ಯುವತಿಯ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದು, ರಘು ಹಾಗೂ ದರ್ಶನ್ ಅವರನ್ನು ವಿಚಾರಣೆಗೆ ಒಳಪಡಿಸಿರುವ ಸಾಧ್ಯತೆ ಇದೆ. ಇನ್ನು ಪೊಲೀಸರ ತನಿಖೆಯಿಂದ ಪ್ರಕರಣದ ಸಂಪೂರ್ಣ ಸತ್ಯಾಂಶ ಹೊರಬರಬೇಕಿದೆ.

MUST WATCH : ವರಮಹಾಲಕ್ಷ್ಮಿ ಪೂಜೆಯಲ್ಲಿ ಚಿನ್ನ ಕಳವು..! – ಮನೆಗೆ ಬಂದಿದ್ದವರಿಗೆ ಪೊಲೀಸ್ ಟಾರ್ಚರ್..?




