
ಅ. 16 ರಂದು ಕರ್ನಾಟಕದ ನೂತನ ರಾಜ್ಯಪಾಲೆ ಸುಧಾ ಯಾದವ್ ಪ್ರಮಾಣವಚನ
ರಾಜ್ಯದ ನೂತನ ರಾಜ್ಯಪಾಲೆಯಾಗಿ ನೇಮಕಗೊಂಡಿರುವ ಡಾ. ಸುಧಾ ಯಾದವ್ ನಾಳೆ, ಅಕ್ಟೋಬರ್ 16ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಲೋಕಭವನದಲ್ಲಿ ಬೆಳಗ್ಗೆ 10 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳು ಸುಧಾ ಯಾದವ್ ಅವರಿಗೆ ರಾಜ್ಯಪಾಲರ ಹುದ್ದೆಯ ಪ್ರಮಾಣವಚನ ಬೋಧಿಸಲಿದ್ದಾರೆ.
ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸಮಾರಂಭ
ಹೌದು.. ನಾಳೆ ಬೆಳಗ್ಗೆ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸಮಾರಂಭ ಆಯೋಜಿಸಲಾಗಿದೆ. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸುಧಾ ಯಾದವ್ ಅವರಿಗೆ ರಾಜ್ಯಪಾಲರ ಹುದ್ದೆಯ ಪ್ರಮಾಣವಚನ ಬೋಧಿಸಲಿದ್ದಾರೆ. ಪ್ರಮಾಣವಚನ ಸ್ವೀಕಾರದೊಂದಿಗೆ ಸುಧಾ ಯಾದವ್ ರಾಜ್ಯದ ಸಾಂವಿಧಾನಿಕ ಮುಖ್ಯಸ್ಥೆಯಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಆರು ರಾಜ್ಯಗಳ ರಾಜ್ಯಪಾಲರ ನೇಮಕಾತಿ ಆದೇಶ
ಇನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಕ್ಟೋಬರ್ 12ರಂದು ಕರ್ನಾಟಕ ಸೇರಿದಂತೆ ಆರು ರಾಜ್ಯಗಳ ರಾಜ್ಯಪಾಲರ ನೇಮಕಾತಿ ಆದೇಶ ಹೊರಡಿಸಿದ್ದರು. ಕರ್ನಾಟಕದ ರಾಜ್ಯಪಾಲರಾಗಿದ್ದ ಥಾವರ್ಚಂದ್ ಗೆಹ್ಲೋಟ್ ಅವರ ಐದು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸುಧಾ ಯಾದವ್ ಅವರನ್ನು ನೂತನ ರಾಜ್ಯಪಾಲೆಯಾಗಿ ನೇಮಕ ಮಾಡಲಾಗಿದೆ.
READ THIS : ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ! ಕೊಲೆ ಎಂದು ಆರೋಪ!
ಅಕ್ಟೋಬರ್ 16 ರಂದು ಪ್ರಮಾಣವಚನ
ಇನ್ನು ಹರಿಯಾಣ ಮೂಲದ ಡಾ. ಸುಧಾ ಯಾದವ್ ಅವರು ಮಾಜಿ ಲೋಕಸಭಾ ಸದಸ್ಯೆಯಾಗಿದ್ದಾರೆ. ಮಹೇಂದ್ರಗಢ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಅವರು, ಬಿಜೆಪಿ ರಾಷ್ಟ್ರೀಯ ಸಂಘಟನೆಯ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆಯಾಗಿಯೂ ಕಾರ್ಯನಿರ್ವಹಿಸಿದ್ದ ಸುಧಾ ಯಾದವ್, ಬಿಜೆಪಿ ಸಂಸದೀಯ ಮಂಡಳಿಯಲ್ಲಿಯೂ ಸ್ಥಾನ ಪಡೆದಿದ್ದರು.

ಇನ್ನು ಸುಧಾ ಯಾದವ್ ಅವರ ನೇಮಕಾತಿಯೊಂದಿಗೆ ಕರ್ನಾಟಕಕ್ಕೆ ಎರಡನೇ ಮಹಿಳಾ ರಾಜ್ಯಪಾಲರು ದೊರೆತಂತಾಗಲಿದೆ. ಈ ಹಿಂದೆ ವಿ.ಎಸ್. ರಮಾದೇವಿ ಅವರು ಕರ್ನಾಟಕದ ರಾಜ್ಯಪಾಲೆಯಾಗಿ ಸೇವೆ ಸಲ್ಲಿಸಿದ್ದರು.
MUST WATCH : ದಸರಾ HELIRIDEಗೆ ನೀರಸ ಪ್ರತಿಕ್ರಿಯೆ – ದುಬಾರಿ TICKET ದರವೇ ಕಾರಣನಾ..?




