ತಮಿಳುನಾಡು CM Vijay ಜೂನ್ 12ರಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ತಮಿಳುನಾಡು CM Vijay ಅವರು ಶುಕ್ರವಾರ (ಜೂನ್ 12) ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಭಕ್ತರಿಗೆ ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ದರ್ಶನ ನಿರ್ಬಂಧಿಸಲಾಗಿದೆ. ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಅಧಿಕೃತ ಸೂಚನೆ ನೀಡಿದೆ.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಜೋಸೆಫ್ ವಿಜಯ್ ಅವರು ಮೊದಲ ಬಾರಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆಯಲಿದ್ದು, ಅವರ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.
MUST READ : Gold & Silver Rate : ಇಂದು ಕರ್ನಾಟಕ ಸೇರಿ ದೇಶಾದ್ಯಂತ ಚಿನ್ನ, ಬೆಳ್ಳಿ ಬೆಲೆ ಎಷ್ಟು…?

ಬಿಗಿ ಪೊಲೀಸ್ ಬಂದೋಬಸ್ತ್
ಮುಖ್ಯಮಂತ್ರಿಗಳ ಸಂಚಾರ ಮಾರ್ಗ, ದೇವಸ್ಥಾನದ ಪ್ರವೇಶ ದ್ವಾರ ಮತ್ತು ಆವರಣದಲ್ಲಿ ವಿಶೇಷ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದೆ.

ಭಕ್ತರಿಗೆ ಪ್ರಮುಖ ಸೂಚನೆ
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಭಕ್ತರಿಗೆ ಕೆಲವು ಪ್ರಮುಖ ಸೂಚನೆಗಳನ್ನು ನೀಡಿದೆ:
- ಮಧ್ಯಾಹ್ನ 12ರಿಂದ ಸಂಜೆ 5ರವರೆಗೆ ದರ್ಶನಕ್ಕೆ ಬರದಿರುವುದು ಸೂಕ್ತ.
- ಮುಖ್ಯಮಂತ್ರಿ ವಾಹನಗಳ ಕಾನ್ವಾಯ್ ಸಾಗುವ ಮಾರ್ಗದಲ್ಲಿ ಗುಂಪುಗೂಡಬಾರದು.
- ದೇವಸ್ಥಾನದ ಪ್ರವೇಶ ದ್ವಾರ ಮತ್ತು ಆವರಣದಲ್ಲಿ ಅನಗತ್ಯ ಜನಸಂದಣಿ ಮಾಡಬಾರದು.
- ಮುಖ್ಯಮಂತ್ರಿ ಭೇಟಿ ಬಳಿಕ ಅವರು ಹಿಂದಿರುಗಲಿದ್ದು, ಯಾವುದೇ ಸಾರ್ವಜನಿಕ ಕಾರ್ಯಕ್ರಮ ನಿಗದಿಯಾಗಿಲ್ಲ.
ದರ್ಶನದ ವೇಳೆ ಅನಾನುಕೂಲ ಸಾಧ್ಯತೆ
ಭದ್ರತಾ ಕಾರಣಗಳಿಂದ ದೇವಸ್ಥಾನದಲ್ಲಿ ದರ್ಶನಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗುವ ಸಾಧ್ಯತೆ ಇರುವುದರಿಂದ, ಭಕ್ತರು ತಮ್ಮ ಪ್ರಯಾಣವನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.
MUST WATCH : ರಸ್ತೆಗಾಗಿ ಚರಂಡಿ ಮುಚ್ಚಿ ಅವಾಂತರ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ.




