GUBBI : ಸರ್ಕಾರಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ – ವಿದ್ಯಾರ್ಥಿಗಳಿಗೆ ಬಾಸುಂಡೆ ಬರುವಂತೆ ಥಳಿಸಿದ ಶಿಕ್ಷಕ.?

ಶಿಕ್ಷಕರು ಮಕ್ಕಳಿಗೆ ವಿದ್ಯೆ ಕಲಿಸಬೇಕಾದವರು. ತಪ್ಪು ಮಾಡಿದ್ರೆ ಬುದ್ಧಿ ಹೇಳಬೇಕು. ಆದ್ರೆ, ಇಲ್ಲೊಬ್ಬ ಶಿಕ್ಷಕ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ.
7ನೇ ತರಗತಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಬಾಸುಂಡೆ ಬರುವಂತೆ ಥಳಿಸಿದ್ದು, ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗುವಂತಾಗಿದೆ.
ಅಷ್ಟಕ್ಕೂ ಈ ಘಟನೆ ನಡೆದಿರೋದು ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಪಾಠಶಾಲೆಯಲ್ಲಿ.
ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ
ಇನ್ನು ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನ 12 ವರ್ಷದ ನೂತನ್ ಹಾಗೂ ದಯಾನಂದ್ ಎಂದು ಗುರುತಿಸಲಾಗಿದೆ. ಇಬ್ಬರೂ ಇದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಶಿಕ್ಷಕರಿಂದ ತೀವ್ರ ಹಲ್ಲೆಗೊಳಗಾಗಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಶುಕ್ರವಾರ ಎಂದಿನಂತೆ ಶಾಲೆಗೆ ಹೋಗಿದ್ದ ವಿದ್ಯಾರ್ಥಿಗಳು, ಸಂಜೆ ಮನೆಗೆ ಬಂದ ಬಳಿಕ ಪೋಷಕರ ಬಳಿ ಶಿಕ್ಷಕ ಹಲ್ಲೆ ಮಾಡಿರುವ ವಿಚಾರ ತಿಳಿಸಿದ್ದಾರೆ. ಕೂಡಲೇ ಪೋಷಕರು ವಿದ್ಯಾರ್ಥಿಯನ್ನ ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
READ THIS : ಅನೈತಿಕ ಚಟುವಟಿಕೆಯ ತಾಣವಾಗ್ತಿದೆ ಸರ್ಕಾರಿ ಉರ್ದು ಶಾಲೆ

ವಿದ್ಯಾರ್ಥಿಗಳಿಗೆ ಬಾಸುಂಡೆ ಬರುವಂತೆ ಥಳಿಸಿದ ಶಿಕ್ಷಕ
ಇನ್ನು ಇಂಗ್ಲಿಷ್ ಪಾಠ ಮಾಡುತ್ತಿದ್ದ ಸಮೀರ್ ಎಂಬ ಶಿಕ್ಷಕ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಶಿಕ್ಷಕರ ಹಲ್ಲೆಯಿಂದ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಗಾಯಗಳಾಗಿವೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ದೇ ಶಾಲೆ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ಮನಬಂದಂತೆ ಹಲ್ಲೆ ಮಾಡುವುದು ಅಥವಾ ದೈಹಿಕ ಶಿಕ್ಷೆ ನೀಡುವುದು ಕಾನೂನುಬಾಹಿರ. ಹೀಗಿದ್ದರೂ ವಿದ್ಯಾರ್ಥಿಯ ಮೇಲೆ ಶಿಕ್ಷಕರು ಹಲ್ಲೆ ಮಾಡಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.
ಶಿಕ್ಷಕ ಸಮೀರ್ ಸಸ್ಪೆಂಡ್!
ಇನ್ನು ವಿಷಯ ತಿಳಿದು ಬಿಇಓ ನಟರಾಜು ಸೇರಿದಂತೆ ಗುಬ್ಬಿ ಪೊಲೀಸರು ಶಾಲೆಗೆ ಭೇಟಿ ನೀಡಿ, ಶಿಕ್ಷಕ ಸಮೀರ್ನನ್ನ ತರಾಟೆಗೆ ತೆಗೆದುಕೊಂಡಿದ್ದು, ಈ ವೇಳೆ ಸಮೀರ್ ಎಲ್ಲರ ಮುಂದೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾರೆ.
ಸದ್ಯ ಘಟನೆ ಸಂಬಂಧ GUBBI ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಪೋಷಕರು ಮುಂದಾಗಿದ್ದಾರೆ, ಅಲ್ದೇ ತಕ್ಷಣದಿಂದಲೇ ಶಿಕ್ಷಕ ಸಮೀರ್ನನ್ನು ಶಾಲೆಯಿಂದ ಸಸ್ಪೆಂಡ್ ಮಾಡಲಾಗಿದೆ.

MUST WATCH : ಪರಿಷತ್ ಎಲೆಕ್ಷನ್ಗೆ ಡೇಟ್ ಫಿಕ್ಸ್ 4 ಕ್ಷೇತ್ರಗಳಲ್ಲಿ ಅ. 23ಕ್ಕೆ ಮತದಾನ




