ಪತಿ, ನಾದಿನಿಯನ್ನು ಸುಮ್ಮನೆ ಬಿಡಬೇಡ – ಮದುವೆಯಾದ ನಾಲ್ಕೇ ತಿಂಗಳಿಗೆ ಶಿಕ್ಷಕಿ Suicide

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನವವಿವಾಹಿತೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಇನ್ನು ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿರುವ ಡೆತ್ನೋಟ್ ಲಭ್ಯಲಾಗಿದ್ದು, ಪತಿ ಹಾಗೂ ಪತಿಯ ಅಕ್ಕನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಘಟನೆ ಸಂಬಂದ ಪ್ರಕರಣ ದಾಖಲಿಸಿಕೊಂಡಿರುವ ಕಾಮಾಕ್ಷಿಪಾಳ್ಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ
ಚಿಕ್ಕಮಗಳೂರು ಮೂಲದ 25 ವರ್ಷದ ಶ್ವೇತಾ Suicide ಮಾಡಿಕೊಂಡ ನವವಿವಾಹಿತೆ. ಅವರು ಬೆಂಗಳೂರಿನ ಸುಂಕದಕಟ್ಟೆಯಲ್ಲಿ ಪತಿಯೊಂದಿಗೆ ವಾಸವಾಗಿದ್ದು, ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ನಾಲ್ಕು ತಿಂಗಳ ಹಿಂದಷ್ಟೇ ಇವರಿಗೆ ಬೆಂಗಳೂರಿನ ಕಮಲನಗರದ ಶಕ್ತಿ ಗಣಪತಿ ದೇವಸ್ಥಾನದಲ್ಲಿ ಪ್ರೇಮ ವಿವಾಹವಾಗಿತ್ತು. ನೆನ್ನೆ ರಾತ್ರಿ ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಆರಣಾಗಿದ್ದಾರೆ.
ಇದನ್ನು ಓದಿ : ಸ್ನೇಹಿತನಿಗೆ ಮೆಸೇಜ್ ಕಳಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ!

ಡೆಟ್ನೋಟ್ನಲ್ಲಿ ಏನಿದೆ?
ಆತ್ಮಹತ್ಯೆಗೂ ಮುನ್ನ ಶ್ವೇತಾ ಡೆತ್ನೋಟ್ ಬರೆದಿದ್ದು, ತನ್ನ ಸಾವಿಗೆ ಪತಿ ಹಾಗೂ ಪತಿಯ ಅಕ್ಕ ಕಾರಣ ಎಂದು ಆರೋಪಿಸಿದ್ದಾರೆ. ನಿರಂತರ ಹಿಂಸೆಯಿಂದ ಬದುಕುವ ಆಸೆಯೇ ಇಲ್ಲದಂತಾಗಿದೆ ಎಂದು ಬರೆದಿರುವ ಅವರು, ಆರೋಪಿಗಳನ್ನು ಯಾವುದೇ ಕಾರಣಕ್ಕೂ ಬಿಡಬಾರದು ಎಂದು ತಾಯಿಗೆ ಮನವಿ ಮಾಡಿದ್ದಾರೆ. ಜೊತೆಗೆ ತಮ್ಮಿಂದಾದ ತಪ್ಪಿಗೆ ಕ್ಷಮೆಯನ್ನೂ ಕೋರಿದ್ದಾರೆ.
Suicide – ಪ್ರಕರಣ ದಾಖಲು!
ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್ನೋಟ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತರ ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಡೆತ್ನೋಟ್ನಲ್ಲಿರುವ ಆರೋಪಗಳ ಸತ್ಯಾಸತ್ಯತೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆಯ ಬಳಿಕವೇ ಆತ್ಮಹತ್ಯೆಯ ನಿಖರ ಕಾರಣ ತಿಳಿಯಲಿದೆ.

ಇದನ್ನು ನೋಡಿ : ಮಧುಗಿರಿಯಲ್ಲಿ ರೈಲ್ವೆ ನಿಲ್ದಾಣಕ್ಕೆ ಶಂಕುಸ್ಥಾಪನೆ 2028ರ ಎಲೆಕ್ಷನ್ ಬಗ್ಗೆ KN ರಾಜಣ್ಣ ಮಾತು




