
SHIVAMOGGA ದಲ್ಲಿ ಹಿಟ್ ಆ್ಯಂಡ್ ರನ್ಗೆ ಶಿಕ್ಷಕಿ ಬಲಿ!
ವಾಕಿಂಗ್ಗೆ ತೆರಳಿದ್ದ ಶಿಕ್ಷಕಿಗೆ ಹಿಂದಿನಿಂದ ಮಾರುತಿ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ನಗರದ ರಿಂಗ್ ರಸ್ತೆ ಸಮೀಪದ ಸಾಗರ ರಸ್ತೆಯ ಗಂಗಮ್ಮ ದೇವಿ ದೇವಸ್ಥಾನದ ಬಳಿ ಈ ದುರ್ಘಟನೆ ಸಂಭವಿಸಿದೆ. ಶಕ್ತಿದಾಮ ಲೇಔಟ್ನ ಪ್ರೊಫೆಸರ್ ಅವೀಶ್ ಅವರ ಪತ್ನಿ ರೂಪಾ (41) ಮೃತಪಟ್ಟ ಶಿಕ್ಷಕಿ.
READ THIS : ಮಗ ಸಾವು – ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು
ಹಿಟ್ ಆ್ಯಂಡ್ ರನ್ಗೆ ಶಿಕ್ಷಕಿ ಬಲಿ!
ರೂಪಾ ಅವರು ವಾಕಿಂಗ್ಗೆ ತೆರಳಿದ್ದ ವೇಳೆ ಹಿಂದಿನಿಂದ ಮಾರುತಿ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದವರು ಕಾರನ್ನು ಬೆನ್ನಟ್ಟಿ ಚಾಲಕನನ್ನು ಹಿಡಿದಿದ್ದಾರೆ.

SHIVAMOGGA – ಚಿಕಿತ್ಸೆ ಫಲಕಾರಿಯಾಗದೆ ಸಾವು
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರೂಪಾ ಅವರನ್ನು ನಂಜಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
MUST WATCH : ರಸ್ತೆಯಲ್ಲೇ ಅಕ್ರಮ ಮದ್ಯ ಮಾರಾಟ ಅಧಿಕಾರಿಗಳ ಕಣ್ಗೆ ಕಾಣ್ತಿಲ್ವಾ ಅಕ್ರಮ.!




