ನೀಟ್-ಯುಜಿ 2026 ಮರುಪರೀಕ್ಷೆಯ ಭದ್ರತೆಗಾಗಿ Telegram ಗೆ ವಿಧಿಸಿರುವ ತಾತ್ಕಾಲಿಕ ನಿರ್ಬಂಧವನ್ನು ಪ್ರಶ್ನಿಸಿ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.

ನೀಟ್-ಯುಜಿ 2026 ಮರುಪರೀಕ್ಷೆಯ ಭದ್ರತೆಯ ಹಿನ್ನೆಲೆಯಲ್ಲಿ ಭಾರತದಲ್ಲಿ Telegram ಗೆ ವಿಧಿಸಲಾಗಿರುವ ತಾತ್ಕಾಲಿಕ ನಿರ್ಬಂಧವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ಈ ಬೆಳವಣಿಗೆ ಶಿಕ್ಷಣ ಮತ್ತು ತಂತ್ರಜ್ಞಾನ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಟೆಲಿಗ್ರಾಮ್ ನಿರ್ಬಂಧಕ್ಕೆ ಕಾರಣವೇನು?
ಜೂನ್ 21ರಂದು ನಡೆಯಲಿರುವ ನೀಟ್ ಮರುಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ತಾತ್ಕಾಲಿಕ ನಿರ್ಬಂಧದ ಕ್ರಮ ಕೈಗೊಂಡಿದೆ ಎಂದು ವರದಿಯಾಗಿದೆ.
ಈ ಹಿಂದೆ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಅಕ್ರಮ ಮಾಹಿತಿ ಹಂಚಿಕೆ ಕುರಿತು ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಅಗತ್ಯ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
MUST READ : ಲಿವ್ ಇನ್ ಗೆಳತಿಯ ಕತ್ತು ಹಿಸುಕಿ ಕೊಂದ ಪ್ರಿಯಕರ!

ದೆಹಲಿ ಹೈಕೋರ್ಟ್ಗೆ ಟೆಲಿಗ್ರಾಮ್ ಅರ್ಜಿ
ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ನ್ಯಾಯಮೂರ್ತಿ ತೇಜಸ್ ಕರಿಯಾ ನೇತೃತ್ವದ ಪೀಠದ ಮುಂದೆ ವಿಷಯ ಪ್ರಸ್ತಾಪವಾಗಿದ್ದು, ತುರ್ತು ವಿಚಾರಣೆಗೆ ನ್ಯಾಯಾಲಯ ಒಪ್ಪಿಗೆ ಸೂಚಿಸಿದೆ.

ಎನ್ಟಿಎ ಮತ್ತು ಕೇಂದ್ರದ ವಾದ
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪರೀಕ್ಷೆಯ ಪಾರದರ್ಶಕತೆ ಮತ್ತು ಲಕ್ಷಾಂತರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕ್ರಮ ಅಗತ್ಯವಾಗಿದೆ ಎಂದು ಹೇಳಿದೆ.
ಪರೀಕ್ಷಾ ಅಕ್ರಮಗಳು ಮತ್ತು ಸುಳ್ಳು ವದಂತಿಗಳನ್ನು ತಡೆಯಲು ಸೀಮಿತ ಅವಧಿಯ ನಿರ್ಬಂಧ ಪರಿಣಾಮಕಾರಿ ಕ್ರಮ ಎಂದು ಅಧಿಕಾರಿಗಳು ವಾದಿಸಿದ್ದಾರೆ.

ಪರೀಕ್ಷಾ ಭದ್ರತೆಗೆ ಒತ್ತು
ಶಿಕ್ಷಣ ಸಚಿವಾಲಯ ಮತ್ತು ಪರೀಕ್ಷಾ ಅಧಿಕಾರಿಗಳ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಪರೀಕ್ಷೆಗೆ ಸಂಬಂಧಿಸಿದ ನಕಲಿ ಮಾಹಿತಿ ಹಾಗೂ ಅಕ್ರಮ ಚಟುವಟಿಕೆಗಳ ಬಗ್ಗೆ ಹಲವು ದೂರುಗಳು ಬಂದಿದ್ದವು. ಹೀಗಾಗಿ ಮರುಪರೀಕ್ಷೆ ಸುಗಮವಾಗಿ ನಡೆಯಲು ವಿಶೇಷ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಹೈಕೋರ್ಟ್ ತೀರ್ಪಿನತ್ತ ಚಿತ್ತ
ಟೆಲಿಗ್ರಾಮ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ದೆಹಲಿ ಹೈಕೋರ್ಟ್ನಲ್ಲಿ ನಡೆಯಲಿದ್ದು, ಕೇಂದ್ರ ಸರ್ಕಾರದ ತಾತ್ಕಾಲಿಕ ನಿರ್ಬಂಧದ ಬಗ್ಗೆ ನ್ಯಾಯಾಲಯದ ನಿರ್ಧಾರ ಮಹತ್ವ ಪಡೆದುಕೊಂಡಿದೆ.
MUST WATCH : ನಿರ್ಮಾಣ ಹಂತದ ಕ್ರೀಡಾಂಗಣದಲ್ಲಿ ದುರಂತ ಲಿಫ್ಟ್ ನ ಗುಂಡಿಗೆ ಬಿದ್ದು ಪುಟ್ಟ ಕಂದಮ್ಮ ಸಾ**




