Vijay Kumar : ಮಂಗಳಗೌರಿ ಮದುವೆ ಧಾರಾವಾಹಿ ನಟ ಇನ್ನಿಲ್ಲ

ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದ ಖ್ಯಾತ ಹಿರಿಯ ಕಲಾವಿದ, ನಟ ಹಾಗೂ ಗಾಯಕ ವಿಜಯ್ ಕುಮಾರ್ ಜಿತ್ತೂರಿ ನಿಧನರಾಗಿದ್ದಾರೆ. ನಿನ್ನೆ (ಆಗಸ್ಟ್ 10) ಸಂಜೆ ತಮ್ಮ ಹುಟ್ಟೂರಾದ ಗದಗದ ಬೆಟಗೇರಿಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ ಸೋಮವಾರ ಉಸಿರಾಟದ ತೊಂದರೆ ಕಾಣಸಿಕೊಂಡಿತ್ತು.
ಕಲಾ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ
Vijay Kumar ಜಿತ್ತೂರಿ ಅವರು ಕಿರುತೆರೆ ಮಾತ್ರವಲ್ಲದೆ ಹಿರಿತೆರೆ ಹಾಗೂ ರಂಗಭೂಮಿಯಲ್ಲೂ ತಮ್ಮ ಅಭಿನಯದ ಮೂಲಕ ಗುರುತಿಸಿಕೊಂಡಿದ್ದರು. ನಟನೆಯ ಜೊತೆಗೆ ಗಾಯಕರಾಗಿಯೂ ಅವರು ಕಲಾ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದರು.
ಇದನ್ನು ಓದಿ : ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ನಿಧನ

ಮಂಗಳಗೌರಿ ಮದುವೆ ಧಾರಾವಾಹಿಯಲ್ಲಿ ನಟನೆ
ಕಿರುತೆರೆಯ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ ಮಂಗಳ ಗೌರಿ ಮದುವೆಯಲ್ಲಿ ಅವರು ಕಾನ್ಸ್ಟೇಬಲ್ ಪಾತ್ರದಲ್ಲಿ ಅಭಿನಯಿಸಿದ್ದರು. ನಟ ಗಗನ್ ಚಿನ್ನಪ್ಪ ಅವರೊಂದಿಗೆ ಧಾರಾವಾಹಿಯಲ್ಲಿ ಹಲವು ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದ ವಿಜಯ್ ಕುಮಾರ್, ತಮ್ಮ ಸಹಜ ಅಭಿನಯದಿಂದ ಪ್ರೇಕ್ಷಕರ ಗಮನ ಸೆಳೆದಿದ್ದರು.
Vijay Kumar ಅವರಿಗೆ ನಟನಾ ಅವಕಾಶಗಳು ದೊರೆಯುತ್ತಿರಲಿಲ್ಲ
ಬಣ್ಣದ ಲೋಕದೊಂದಿಗೆ ಹಲವು ವರ್ಷಗಳ ಒಡನಾಟ ಹೊಂದಿದ್ದ ವಿಜಯ್ ಕುಮಾರ್ ಅವರಿಗೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ನಟನಾ ಅವಕಾಶಗಳು ದೊರೆಯುತ್ತಿರಲಿಲ್ಲ ಎನ್ನಲಾಗಿದೆ. ಇದರೊಂದಿಗೆ ಆರ್ಥಿಕ ಸಂಕಷ್ಟವೂ ಅವರನ್ನು ಕಾಡುತ್ತಿತ್ತು. ಮನೆ ಬಾಡಿಗೆ ಕಟ್ಟಲು ಸಾಧ್ಯವಾಗದ ಪರಿಸ್ಥಿತಿ ಎದುರಾದ ಹಿನ್ನೆಲೆಯಲ್ಲಿ ಅವರು ತಮ್ಮ ಹುಟ್ಟೂರಾದ ಗದಗಕ್ಕೆ ಮರಳಿದ್ದರು ಎಂದು ತಿಳಿದುಬಂದಿದೆ. ಈಗ ಅವರು ಇಹಲೋಕ ತ್ಯಜಿಸಿದ್ದಾರೆ.
ಇದನ್ನು ನೋಡಿ : ತುಮಕೂರಲ್ಲಿ ಬರ ಅಧ್ಯಯನ ಪ್ರವಾಸ – ರೈತರ ಜಮೀನಿಗೆ DCM PARAM VISIT




