ಬಾಗಲಕೋಟೆ ಜಿಲ್ಲೆಯ Mudhol ತಾಲೂಕಿನ ಸೊರಗಾಂವ್ ಬಳಿ ಬಸ್ಗೆ ಬೈಕ್ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ 20 ವರ್ಷದ ಯುವಕ ಸಜೀವ ದಹನಗೊಂಡಿದ್ದಾನೆ.

ಬಾಗಲಕೋಟೆ ಜಿಲ್ಲೆಯ Mudhol ತಾಲೂಕಿನ ಸೊರಗಾಂವ್ ಗ್ರಾಮದ ಬಳಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಸ್ಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ಗೆ ಬೆಂಕಿ ಹೊತ್ತಿಕೊಂಡು 20 ವರ್ಷದ ಯುವಕ ಸ್ಥಳದಲ್ಲೇ ಸಜೀವ ದಹನಗೊಂಡಿರುವ ಘಟನೆ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ.
ಮೃತನನ್ನು ಮುಧೋಳ ಪಟ್ಟಣದ ಜನತಾ ಪ್ಲಾಟ್ ನಿವಾಸಿ ನವೀನ್ ಹನುಮಂತ ಗೋರ್ಕ್ (20) ಎಂದು ಗುರುತಿಸಲಾಗಿದೆ.
MUST READ : Kalaburagi : ಕೃಷಿ ಹೊಂಡದಲ್ಲಿ ಮುಳುಗಿ ಚಿಕ್ಕಪ್ಪ- ಮಗನ ದುರ್ಮರಣ..!!

ಬಸ್ಗೆ ಡಿಕ್ಕಿಯಾದ ತಕ್ಷಣ ಹೊತ್ತಿ ಉರಿದ ಬೈಕ್
ಪೊಲೀಸರ ಮಾಹಿತಿ ಪ್ರಕಾರ, ಬಾದಾಮಿಯಿಂದ ಇಚಲಕರಂಜಿ ಕಡೆಗೆ ತೆರಳುತ್ತಿದ್ದ ಬಸ್ಗೆ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಬೈಕ್ಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ.
ಬೆಂಕಿಯ ಕೆನ್ನಾಲಿಗೆಯಲ್ಲಿ ಸಿಲುಕಿದ ಸವಾರ ನವೀನ್ ಹೊರಬರಲು ಸಾಧ್ಯವಾಗದೇ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯ ದೃಶ್ಯ ಸ್ಥಳದಲ್ಲಿದ್ದವರನ್ನು ಬೆಚ್ಚಿಬೀಳಿಸಿದೆ.

ಸ್ಥಳದಲ್ಲಿ ಉದ್ವಿಗ್ನ ವಾತಾವರಣ
ಅಪಘಾತದ ಬಳಿಕ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.
MUST WATCH : ಆರ್ ಎಸ್ ಎಸ್ , ಬಿಜೆಪಿ ವಿರುದ್ಧ ಸಿದ್ದು ಗುಡುಗು ಹರಿಪ್ರಸಾದ್ ಜೊತೆ ನಿಲ್ಲುವಂತೆ ಸಲಹೆ




