
ಲಾರಿ ಹಾಗೂ ಸ್ಕೂಟರ್ ನಡುವೆ ಭೀಕರ ACCIDENT – ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಪಿಯುಸಿ ವಿದ್ಯಾರ್ಥಿನಿ ಸಾವು.!
ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಚಕ್ರಕ್ಕೆ ಸಿಲುಕಿ ಪಿಯು ವಿದ್ಯಾರ್ಥಿನಿಯೋರ್ವಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ನಗರದ ಬಿ.ಎಂ. ರಸ್ತೆಯ ವಿಶ್ವಕರ್ಮ ವೃತ್ತದ ಬಳಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನ ಹಾಸನದ ಗಾಂಧಿನಗರ ನಿವಾಸಿ 18 ವರ್ಷದ ಲಿಖಿತಾ ಎಂದು ಗುರುತಿಸಲಾಗಿದೆ.
READ THIS : ಶಾಲಾ ವಾಹನ ಹರಿದು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದಾರುಣ ಸಾವು!

ಲಾರಿ ಚಕ್ರಕ್ಕೆ ಸಿಲುಕಿ ಪಿಯುಸಿ ವಿದ್ಯಾರ್ಥಿನಿ ಸಾವು.!
ಇನ್ನು ಕಾಲೇಜು ಮುಗಿಸಿ ಮನೆಗೆ ಬಂದಿದ್ದ ಲಿಖಿತಾ ಬಳಿಕ ಗೆಳತಿ ಜೊತೆ ಸ್ಕೂಟರ್ನಲ್ಲಿ ಸಿಟಿಗೆ ತೆರಳಿದ್ರು. ಹಾಸನದ ಬಸ್ ನಿಲ್ದಾಣ ಕಡೆಯಿಂದ ಡೈರಿ ಕಡೆಗೆ ಸ್ಕೂಟರ್ ತಿರುಗಿಸಿದ್ದಾರೆ. ಈ ವೇಳೆ ಅತಿ ವೇಗವಾಗಿ ಬಂದ ಲಾರಿ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ನಲ್ಲಿದ್ದ ಲಿಖಿತಾ ರಸ್ತೆಗೆ ಬಿದ್ದಿದ್ದು, ಬಳಿಕ ಆಕೆಯನ್ನ ಲಾರಿ ಕಾಂಗ್ರೆಸ್ ಭವನದವರೆಗೆ ಎಳೆದುಕೊಂಡು ಹೋಗಿದೆ. ಪರಿಣಾಮ ಲಾರಿ ಚಕ್ರಕ್ಕೆ ಸಿಲುಕಿ ಲಿಖಿತಾ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಚಿನ್ಮಯಿ ಎಂಬಾಕೆ ಗಂಭೀರವಾಗಿ ಗಾಯಗೊಂಡಿದ್ದು, ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತಕ್ಕೆ ಕಾರಣವೇನು?
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಂಚಾರ ಪೊಲೀಸರು ಹಾಗೂ ಸಿಬ್ಬಂದಿ ದೌಡಾಯಿಸಿದ್ದು, ಕ್ರೇನ್ ಸಹಾಯದಿಂದ ಲಾರಿಯಡಿ ಸಿಲುಕಿದ್ದ ಮೃತದೇಹವನ್ನ ಹೊರತೆಗೆಯಲಾಗಿದೆ. ಇನ್ನು ಪಾನಮತ್ತವಾಗಿ ಲಾರಿ ಚಲಾಯಿಸಿದ್ದರಿಂದಲೇ ACCIDENT ಆಗಿದೆ ಎಂದು ಸ್ಥಳೀಯರು ಚಾಲಕನ ವಿರುದ್ಧ ಆಕ್ರೋಶ ಹೊರಹಾಕಿದ್ದು, ಘಟನೆ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸದ್ಯ ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
MUST WATCH : INJECTION ಬಳಿಕ ಆರೋಗ್ಯದಲ್ಲಿ ಏರುಪೇರು – ಸರ್ಕಾರಿ ಆಸ್ಪತ್ರೆಯಲ್ಲಿ ಯುವಕ ಸಾ*




