Krishna ನದಿ ತೀರದಲ್ಲಿ ಹೈ ಅಲರ್ಟ್..! ಹೆಚ್ಚಿದ ನೀರಿನ ಒಳ ಹರಿವು

Krishna ನದಿ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಪರಿಣಾಮ ಕೃಷ್ಣಾ ನದಿಯ ಒಳಹರಿವು ಮತ್ತೊಮ್ಮೆ ಒಂದು ಲಕ್ಷ ಕ್ಯೂಸೆಕ್ ಗಡಿ ದಾಟಿದೆ.
1 ಲಕ್ಷ ಕ್ಯೂಸೆಕ್ ದಾಟಿದ Krishna ನದಿ ಒಳಹರಿವು..!
ಇನ್ನು ಮಹಾರಾಷ್ಟ್ರದಲ್ಲಿರುವ 105 ಟಿಎಂಸಿ ಸಾಮರ್ಥ್ಯದ ಕೋಯ್ನಾ ಜಲಾಶಯವೂ ಶೇ.86ರಷ್ಟು ಭರ್ತಿಯಾಗಿದೆ. ಜಲಾಶಯಕ್ಕೆ ಒಳಹರಿವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಿಸಲು ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದರ ಪರಿಣಾಮ ಕೃಷ್ಣಾ ನದಿಗೆ ಹರಿದುಬರುವ ನೀರಿನ ಪ್ರಮಾಣ ಮತ್ತಷ್ಟು ಹೆಚ್ಚಾಗಿದೆ.
ಕೃಷ್ಣಾ ನದಿ ಮಾತ್ರವಲ್ಲದೆ ವೇದಗಂಗಾ ಹಾಗೂ ದೂಧಗಂಗಾ ನದಿಗಳ ಒಳಹರಿವಿನಲ್ಲೂ ಗಣನೀಯ ಏರಿಕೆಯಾಗಿದೆ. ನೀರಿನ ಪ್ರಮಾಣ ಹೆಚ್ಚಾದ ಪರಿಣಾಮ ಚಿಕ್ಕೋಡಿ ಉಪವಿಭಾಗದ 8 ಕೆಳಹಂತದ ಸೇತುವೆಗಳು ಜಲಾವೃತವಾಗಿವೆ.
ಇದನ್ನೂ ಓದಿ : ಮಣ್ಣಿನಡಿ ಮುಚ್ಚಿಟ್ಟಿದ್ದ ನವಜಾತ ಶಿಶು ಶವ ಪತ್ತೆ.!

ಪ್ರವಾಹ ಭೀತಿ ಹಿನ್ನೆಲೆ ಕೃಷ್ಣಾ ನದಿ ತೀರದಲ್ಲಿ ಹೈ ಅಲರ್ಟ್ ಘೋಷಣೆ!
ನದಿಗಳ ಒಳಹರಿವು ಇದೇ ರೀತಿ ಮುಂದುವರಿದರೆ ಮತ್ತಷ್ಟು ಪ್ರವಾಹದ ಆತಂಕ ಎದುರಾಗುವ ಸಾಧ್ಯತೆ ಇದೆ. ಹೀಗಾಗಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ನದಿ ಪಾತ್ರದ ಜನರು ಸುರಕ್ಷಿತವಾಗಿರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಒಟ್ಟಾರೆ ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರುತ್ತಿದೆ. ಈಗಾಗಲೇ ಒಳಹರಿವು ಒಂದು ಲಕ್ಷ ಕ್ಯೂಸೆಕ್ ಗಡಿ ದಾಟಿರುವುದರಿಂದ ಚಿಕ್ಕೋಡಿ ಭಾಗದಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸದಂತೆ ಜಿಲ್ಲಾಡಳಿತ ಹಾಗೂ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ.
MUST WATCH : RADHANAGARI DAM ಸಂಪೂರ್ಣ ಭರ್ತಿ – KARNATAKAದತ್ತ ಹೆಚ್ಚಿದ ನೀರಿನ ಹರಿವು..!




