
ಗ್ಯಾರಂಟಿ ಮುಂದುವರಿಸುವುದಾಗಿ ಡಿಕೆಶಿ ಹೇಳಿದ್ದಾರೆ – ಮಾಜಿ CM ಸಿದ್ದು
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ನಾನು ಸಿಎಂ ಆಗಿದ್ದಾಗ ಪಂಚ ಗ್ಯಾರಂಟಿ ಯೋಜನೆಯನ್ನು ನೀಡಿದ್ದೆ. ಅವು ಮುಂದುವರಿಯಬೇಕು. ಯಾವುದೇ ಕಾರಣಕ್ಕೂ ನಿಲ್ಲಿಸಬಾರದು ಎಂದು ಹೇಳಿದ್ದಾರೆ.

ಮುಂಬರುವ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ
ಮೈಸೂರಿನಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ CM ಸಿದ್ದು, ಮುಂಬರುವ ಚುನಾವಣೆಯಲ್ಲಿಯೂ ಕಾಂಗ್ರೆಸ್ ಜಯಗಳಿಸಿ ಅಧಿಕಾರಕ್ಕೆ ಬರಲಿದೆ ಎಂಬ ಆಶಾಭಾವನೆಯಿಂದಲೇ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
READ THIS : CM ಡಿಕೆಶಿ ಬೆನ್ನಿಗೆ ನಿಂತ ಕಾಂಗ್ರೆಸಿಗರ ವಿರುದ್ಧವೂ ಮುಗಿಬಿದ್ದ HDK!

ಗ್ಯಾರಂಟಿ ಮುಂದುವರಿಸುವುದಾಗಿ ಡಿಕೆಶಿ ಹೇಳಿದ್ದಾರೆ
ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೆ. ಅವು ಮುಂದುವರಿಯಬೇಕು. ಯಾವುದೇ ಕಾರಣಕ್ಕೂ ನಿಲ್ಲಿಸಬಾರದು. ಮುಂದುವರೆಸುವುದಾಗಿ ಸಿಎಂ ಡಿ.ಕೆ ಶಿವಕುಮಾರ್ ಕೂಡ ಹೇಳಿದ್ದಾರೆ ಎಂದ್ರು.
ಡಿಕೆಶಿ ಮುಂದುವರಿಯಬೇಕು – ಮಾಜಿ CM ಸಿದ್ದು
ಇನ್ನು ಡಿ.ಕೆ ಶಿವಕುಮಾರ್ ಅವ್ರು, ಪ್ರಜಾಪ್ರಭುತ್ವ, ಭಾರತ ಜೋಡೋ ಯುವ ಸಂಘಟನೆ ರಚನೆ ಮೊದಲಾದ ಒಳ್ಳೆಯ ಕಾರ್ಯಕ್ರಮ ಮಾಡಿದ್ದಾರೆ. ಅವರು ಮುಂದುವರಿಯಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

MUST WATCH : ಭದ್ರಾ ಪೈಪ್ಲೈನ್ ಒಡೆದು ಅವಾಂತರ 50 ಅಡಿ ಎತ್ತರಕ್ಕೆ ಚಿಮ್ಮಿದ ಭದ್ರಾ ನೀರು




