
THEFT : ದೇಗುಲದಲ್ಲಿ ಕಳ್ಳರ ಕೈಚಳಕ – ರಸ್ತೆ ತಡೆದ ಗ್ರಾಮಸ್ಥರು.!
ಅರಸೀಕೆರೆ ತಾಲೂಕಿನ ರಾಮನಹಳ್ಳಿ ಗ್ರಾಮದ ದೇವಸ್ಥಾನದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ದೇವರ ಆಭರಣ ಹಾಗೂ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿರುವ ಘಟನೆ ನಡೆದಿದೆ. ಸುಮಾರು 60 ಲಕ್ಷ ರೂಪಾಯಿ ಮೌಲ್ಯದ ಆಭರಣ ಮತ್ತು ವಸ್ತುಗಳು ಕಳುವಾಗಿವೆ ಎನ್ನಲಾಗಿದ್ದು, ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ.
ಕಳ್ಳರನ್ನು ಕೂಡಲೇ ಪತ್ತೆಹಚ್ಚಬೇಕು ಆಗ್ರಹ
ದೇವಸ್ಥಾನದಲ್ಲಿ ನಡೆದ ಕಳ್ಳತನದಿಂದ ರಾಮನಹಳ್ಳಿ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕಳ್ಳರನ್ನು ಕೂಡಲೇ ಪತ್ತೆಹಚ್ಚಬೇಕು, ಕಳವಾಗಿರುವ ದೇವರ ಆಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು ವಶಕ್ಕೆ ಪಡೆಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
READ THIS : ಮುನೇಶ್ವರ ದೇವಸ್ಥಾನದಲ್ಲಿ ತ್ರಿಶೂಲದಿಂದ ಹುಂಡಿ ಹೊಡೆದು ಕಳ್ಳತನ!

ರಸ್ತೆ ತಡೆದ ಗ್ರಾಮಸ್ಥರು.!
ಇನ್ನು ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ದೇವಸ್ಥಾನಗಳ ಭದ್ರತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕಳ್ಳತನದ ಹಿಂದೆ ಯಾರ ಕೈವಾಡವಿದೆ ಅನ್ನೋದನ್ನು ತನಿಖೆ ಮೂಲಕ ಪತ್ತೆಹಚ್ಚಬೇಕು ಎಂದು ಒತ್ತಾಯಿಸಿದ್ದಾರೆ.
THEFT – ಗ್ರಾಮದಲ್ಲಿ ಆತಂಕ
ಇನ್ನು ಘಟನಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದು, ದೇವಸ್ಥಾನದ ಸುತ್ತಮುತ್ತಲಿನ ಸಿಸಿ ಕ್ಯಾಮೆರಾ ದೃಶ್ಯಾವಳಿ ಸೇರಿದಂತೆ ವಿವಿಧ ಸಾಕ್ಷ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಕಳ್ಳರನ್ನು ಶೀಘ್ರ ಪತ್ತೆಹಚ್ಚಿ, ಕಳುವಾಗಿರುವ ಆಭರಣಗಳನ್ನು ವಶಕ್ಕೆ ಪಡೆಯಬೇಕು ಎಂದು ರಾಮನಹಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

MUST WATCH : ಬಸ್ ಹಾಗೂ ಕಾರಿನ ನಡುವೆ ಆಕ್ಸಿಡೆಂ – ಸ್ಥಳದಲ್ಲೇ ಚಾಲಕ ಸಾ* ಹಲವರು ಗಂಭೀರ




