Thirthahalli ರಸ್ತೆ ಅಪಘಾತ ಮಗು ಸೇರಿ ಮೂವರು ದುರ್ಮರಣ, ಹಲವರಿಗೆ ಗಂಭೀರ ಗಾಯ..!!

Thirthahalli ತಾಲೂಕಿನ ಭಾರತೀಪುರ ಕ್ರಾಸ್ ಬಳಿ ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚೆನ್ನಗಿರಿಯಿಂದ ಶೃಂಗೇರಿ ಕಡೆಗೆ ಸ್ವಿಫ್ಟ್ ಕಾರಿನಲ್ಲಿ 6 ಮಂದಿ ಪ್ರಯಾಣಿಸುತ್ತಿದ್ದರು. ಅದೇ ವೇಳೆ ಮಂಗಳೂರಿನಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಎದುರುಬಂದು ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗಕ್ಕೂ ಹಾನಿಯಾಗಿದೆ.

ಮೃತರು ಮತ್ತು ಗಾಯಾಳುಗಳು
ಈ ಅಪಘಾತದಲ್ಲಿ ರಿಯಾಜ್ ಅಹಮದ್, ಫಾತಿಮಾ ಮತ್ತು ಒಂದು ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನ ಚಾಲಕ ಮತ್ತು ಪಕ್ಕದ ಸೀಟಿನಲ್ಲಿದ್ದ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತದೇಹಗಳನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.




