ಪ್ರಜಾಶಕ್ತಿ ಟಿವಿ ವರದಿ ಬೆನ್ನಲ್ಲೇ ಹಾಸ್ಟೆಲ್ಗೆ ಅಧಿಕಾರಿಗಳ ಭೇಟಿ.

ಚಿಕ್ಕನಾಯಕನಹಳ್ಳಿ ನಗರದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ಕಳಪೆ ಆಹಾರ, ಅಸ್ವಚ್ಛ ಶೌಚಾಲಯಗಳು ಹಾಗೂ ಹಾಸ್ಟೆಲ್ ಸುತ್ತಮುತ್ತ ಬೆಳೆದಿದ್ದ ಗಿಡಗಂಟಿಗಳ ಸಮಸ್ಯೆ ಕುರಿತು ಪ್ರಜಾಶಕ್ತಿ ಟಿವಿ ವರದಿ ಬಿತ್ತರಿಸಿ ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡಿತ್ತು.ಕೊನೆಗೂ ಎಚ್ಚೆತ್ತ ಅಧಿಕಾರಿಗಳು ಹಾಸ್ಟೆಲ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುದ್ದಿ ಬಿತ್ತರವಾದ ಬೆನ್ನಲ್ಲೇ ಹಾಸ್ಟಲ್ ಫುಲ್ ಕ್ಲೀನ್
ಹೌದು.. ಚಿಕ್ಕನಾಯಕನಹಳ್ಳಿ ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ಕುರಿತು ವರದಿ ಪ್ರಕಟವಾಗಿತ್ತು. ಸುದ್ದಿ ಪ್ರಸಾರವಾದ ಕೆಲವೇ ಗಂಟೆಗಳಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀಧರ್ ಅವರು ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದ ಅಧಿಕಾರಿಗಳು, ಹಾಸ್ಟೆಲ್ನ ವಿವಿಧ ವಿಭಾಗಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಇದನ್ನು ಓದಿ : ಹಾಸ್ಟೆಲ್ ಅವ್ಯವಸ್ಥೆ ವಿರುದ್ಧ ABVP ಆಕ್ರೋಶ – ಸಮಸ್ಯೆ ಬಗೆಹರಿಸದಿದ್ದರೆ ಹೋರಾಟದ ಎಚ್ಚರಿಕೆ..!!

ಹಾಸ್ಟೆಲ್ ಅಡುಗೆ ಸಿಬ್ಬಂದಿಗಳಿಗೆ ಖಡಕ್ ವಾರ್ನಿಂಗ್
ಇದೇ ವೇಳೆ ಹಾಸ್ಟೆಲ್ ಆವರಣವನ್ನು ತುರ್ತಾಗಿ ಸ್ವಚ್ಛಗೊಳಿಸಲಾಗಿದ್ದು, ಕಸದ ರಾಶಿ ಹಾಗೂ ಬೆಳೆದಿದ್ದ ಗಿಡಗಂಟಿಗಳನ್ನು ತೆರವುಗೊಳಿಸುವ ಕಾರ್ಯ ಕೂಡ ಆರಂಭಿಸಲಾಯಿತು. ಆಹಾರದ ಗುಣಮಟ್ಟ ಹಾಗೂ ವಿದ್ಯಾರ್ಥಿಗಳ ಆರೈಕೆ ವಿಚಾರದಲ್ಲಿ ನಿರ್ಲಕ್ಷ್ಯ ತೋರಬಾರದು ಎಂದು ಅಡುಗೆ ಸಿಬ್ಬಂದಿ ಹಾಗೂ ವಾರ್ಡನ್ಗೆ ಅಧಿಕಾರಿಗಳು ಖಡಕ್ ಸೂಚನೆ ನೀಡಿದ್ದಾರೆ.

ಇದನ್ನು ನೋಡಿ : ಸರ್ಕಾರಕ್ಕೆ ಇಕ್ಕಟಾದ BIDADI TOWNSHIP – ಬಿಡದಿ ಅಖಾಡಕ್ಕೆ ಇದೀಗ BJP ENTRY




