Rain Alert : ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.

ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಜುಲೈ 17, 18 ಹಾಗೂ 19ರಂದು ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ
ಇತ್ತೀಚಿನ ದಿನಗಳಲ್ಲಿ ಮಳೆಗಾಲದ ನಡುವೆಯೂ ಬಿಸಿಲಿನ ತಾಪ ಹೆಚ್ಚಾಗಿ ಬೇಸಿಗೆಯ ವಾತಾವರಣ ಅನುಭವವಾಗುತ್ತಿತ್ತು. ಆದರೆ ಇದೀಗ ಹವಾಮಾನದಲ್ಲಿ ಬದಲಾವಣೆಯಾಗುವ ನಿರೀಕ್ಷೆಯಿದ್ದು, ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಇದನ್ನು ಓದಿ : ಮತ್ತೆ ಮಂಕಾದ ಮುಂಗಾರು – 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಗುಡುಗು-ಮಿಂಚು ಸಹಿತ ಮಳೆಯಾಗುವ ಜಿಲ್ಲೆಗಳು
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
Rain Alert – ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ
ಯೆಲ್ಲೋ ಅಲರ್ಟ್ ಘೋಷಿಸಿರುವ ಜಿಲ್ಲೆಗಳಲ್ಲಿ ಸ್ಥಳೀಯ ಆಡಳಿತವೂ ಎಚ್ಚರಿಕೆ ವಹಿಸಿದ್ದು, ತಗ್ಗು ಪ್ರದೇಶದ ನಿವಾಸಿಗಳು ಹಾಗೂ ರೈತರು ಹವಾಮಾನ ಮಾಹಿತಿಯನ್ನು ಗಮನಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಪ್ರಯಾಣಿಕರು ಮತ್ತು ವಾಹನ ಸವಾರರು ಕೂಡ ಮಳೆಯ ಸಂದರ್ಭ ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

ಇದನ್ನು ನೋಡಿ : ನಾನು ಸಚಿವ ಸ್ಥಾನದ ಆಕಾಂಕ್ಷಿ – ಹೊಸಬ್ರಿಗೂ ಹೈಕಮಾಂಡ್ ಅವಕಾಶ ಕೊಡಲಿ




