Mandya : ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ತಂದೆ-ತಾಯಿ, ಮಗ

Mandya ಜಿಲ್ಲೆಯ ನೆಹರು ನಗರದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಟೆದಿದೆ. ಮೃತರನ್ನು ಪ್ರಭಾಕರ್, ಅವರ ಪತ್ನಿ ಜ್ಯೋತಿ ಹಾಗೂ ಪುತ್ರ ಸಂತೋಷ್ ಎಂದು ಗುರುತಿಸಲಾಗಿದೆ. ಜ್ಯೋತಿ ಮತ್ತು ಸಂತೋಷ್ ಅವರು ಕಳೆದ ರಾತ್ರಿ ಮನೆಯಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಸಾವಿಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
ಬೆಳಿಗ್ಗೆ ಅಂಗಡಿಯಲ್ಲಿ ಪ್ರಭಾಕರ್ ಶವ
ಇತ್ತ ಇಂದು ಬೆಳಿಗ್ಗೆ ಪ್ರಭಾಕರ್ ಅವರು ತಮ್ಮ ಬಟ್ಟೆ ಅಂಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತ ಸಂತೋಷ್ ಅವರಿಗೆ ಕೇವಲ ಒಂದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು.
ಇದನ್ನು ಓದಿ : Bangalore ನಲ್ಲಿ ವಿವಾಹಿತೆಯ ಅನುಮಾನಾಸ್ಪದ ಸಾವು..!!

Mandya ಪೊಲೀಸರಿಂದ ತನಿಖೆ
ಇನ್ನು ಘಟನಾ ಸ್ಥಳಕ್ಕೆ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾವಿಗೆ ನಿಖರವಾದ ಕಾರಣ ಏನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಮೂವರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇದನ್ನು ನೋಡಿ : ರೈತರಿಗೆ ಇನ್ನೂ ಸಿಕ್ಕಿಲ್ಲ ರಾಗಿ ಹಣ – ಸರ್ಕಾರದ ವಿರುದ್ಧ JDS ಆಕ್ರೋಶ.!




