ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಬಳಿ BMTC ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಹಾಗೂ 2 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

BMTC ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದಾರುಣ ಘಟನೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಸಮೀಪ ನಡೆದಿದೆ. ಅಪಘಾತದಲ್ಲಿ ಮತ್ತೋರ್ವ ಮಗು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದಂಪತಿ ಮತ್ತು 2 ವರ್ಷದ ಮಗು ದುರ್ಮರಣ
ಅಪಘಾತದಲ್ಲಿ ದೇವನಹಳ್ಳಿ ತಾಲೂಕಿನ ತೆಲ್ಲಹಳ್ಳಿ ಗ್ರಾಮದ ನಿವಾಸಿಗಳಾದ ಅರುಣ್ (35), ಪತ್ನಿ ಅನುಷಾ (32) ಹಾಗೂ ಅವರ 2 ವರ್ಷದ ಪುತ್ರಿ ಹರ್ನಾ ಮೃತಪಟ್ಟಿದ್ದಾರೆ. ದಂಪತಿಯ 5 ವರ್ಷದ ಮತ್ತೋರ್ವ ಪುತ್ರಿ ಅನುಶಿಕಾ ಗಂಭೀರವಾಗಿ ಗಾಯಗೊಂಡಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
MUST READ : ರುಕ್ಮಿಣಿ ವಸಂತ್ ಬಿಕಿನಿ ಫೋಟೋ ಹರಿಬಿಟ್ಟ ಮೂವರು ಅರೆಸ್ಟ್!

ಮಾಹಿತಿಯ ಪ್ರಕಾರ, ದಂಪತಿ ತಮ್ಮ ಇಬ್ಬರು ಮಕ್ಕಳೊಂದಿಗೆ ಬೈಕ್ನಲ್ಲಿ ದೇವನಹಳ್ಳಿ ಕಡೆಗೆ ತೆರಳುತ್ತಿದ್ದ ವೇಳೆ, ಸೂಲಿಬೆಲೆಯಿಂದ ಹೊಸಕೋಟೆ ಕಡೆಗೆ ಸಾಗುತ್ತಿದ್ದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್ ರಾಂಗ್ ರೂಟ್ನಲ್ಲಿ ಬಂದಿದ್ದೇ ಅಪಘಾತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ.
ಸ್ಥಳಕ್ಕೆ ಧಾವಿಸಿದ ಪೊಲೀಸರು
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸೂಲಿಬೆಲೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.
ಎರಡು ದಿನಗಳಲ್ಲಿ ಬಿಎಂಟಿಸಿಗೆ ನಾಲ್ವರು ಬಲಿ
ಈ ದುರ್ಘಟನೆಗೆ ಮುನ್ನ, ಜೂನ್ 18ರಂದು ಬೆಂಗಳೂರಿನ ಜ್ಞಾನಭಾರತಿ ಮಂಗನಹಳ್ಳಿ ಕ್ರಾಸ್ ಬಳಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಪಾದಚಾರಿಗೆ ಡಿಕ್ಕಿ ಹೊಡೆದು ರಾಜು (58) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಬಲಿಯಾಗಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.
MUST WATCH : ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಚಿಕಿತ್ಸೆಗಾಗಿ ಬಡ ರೋಗಿಗಳ ಪರದಾಟ | SIRA NEWS |




