
HASSAN : ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ, ಶಕ್ತಿದೇವತೆ ಹಾಸನಾಂಬ ದೇವಿ ಸಾರ್ವಜನಿಕ ದರ್ಶನಕ್ಕೆ ಇಂದು ಕಡೆಯ ದಿನವಾಗಿದೆ.
ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ಕೊನೆಯ ದಿನ. ಈ ಬಾರಿ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಅಭೂತಪೂರ್ವ ಸ್ಪಂದನೆ ಸಿಕ್ಕಿದ್ದು, ಲಕ್ಷಾಂತರ ಭಕ್ತರು ತಾಯಿ ದರ್ಶನ ಪಡೆದಿದ್ದಾರೆ.
READ THIS : ಹಾಸನಾಂಬೆ ದೇಗುಲಕ್ಕೆ ₹19 ಕೋಟಿಗೂ ಅಧಿಕ ಆದಾಯ!

ಕೊನೆ ದಿನದಂದು ಭಕ್ತಸಾಗರವೇ ಸೇರುವ ನಿರೀಕ್ಷೆ
ಇದೀಗ ಕೊನೆಯ ದಿನವಾಗಿರುವ ಹಿನ್ನೆಲೆ ಹಾಸನಾಂಬೆಯ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬರುವ ನಿರೀಕ್ಷೆ ಇದೆ. ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ನಿರಂತರವಾಗಿ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 7 ಗಂಟೆಯಿಂದ ಮಧ್ಯರಾತ್ರಿ 1 ಗಂಟೆಯವರೆಗೆ ನೈವೇದ್ಯಕ್ಕಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ.

HASSAN – ಟಿಕೆಟ್ ಹಾಗೂ ಲಾಡು ಮಾರಾಟದಿಂದ ಹೆಚ್ಚು ಆದಾಯ
ಈ ಅವಧಿಯಲ್ಲಿ ಭಕ್ತರು ಸರತಿ ಸಾಲಿನಲ್ಲೇ ಕಾಯಬೇಕಾಗುತ್ತದೆ. ಬಳಿಕ ಮಧ್ಯರಾತ್ರಿ 1 ಗಂಟೆಯಿಂದ ಬುಧವಾರ ಬೆಳಗ್ಗೆ 7 ಗಂಟೆಯವರೆಗೆ ಮತ್ತೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರಲಿದೆ. ಈ ಬಾರಿಯೂ ವಿಶೇಷ ದರ್ಶನದ ಟಿಕೆಟ್ ಹಾಗೂ ಲಾಡು ಮಾರಾಟದಿಂದ ಹೆಚ್ಚು ಆದಾಯ ಸಂಗ್ರಹವಾಗಿದೆ.

ಇನ್ನು ಈ ಬಾರಿಯ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಸಾರ್ವಜನಿಕ ದರ್ಶನದ ಕೊನೆಯ ದಿನವೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ನಿರೀಕ್ಷೆಯಿದೆ.
MUST WATCH : ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಬಲಿ ಚಿಂತಾಮಣಿ ಆಸ್ಪತ್ರೆಯಲ್ಲಿ ಏನಿದು ಎಡವಟ್ಟು





