ಸೌಜನ್ಯ ಅತ್ಯಾಚಾರ & ಕೊಲೆ ಕೇಸ್ – ತನಿಖಾಧಿಕಾರಿಯಾಗಿ ಓರ್ವ ಹಿರಿಯ IPS ಅಧಿಕಾರಿ ನೇಮಕ

ಸುಮಾರು 14 ವರ್ಷಗಳ ಹಿಂದಿನ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಚನೆಯಾಗಿರುವ ವಿಶೇಷ ತನಿಖಾ ತಂಡ ಇದೀಗ ತನಿಖಾಧಿಕಾರಿಯನ್ನ ನೇಮಕ ಮಾಡಿದೆ. ಹಿರಿಯ IPS ಅಧಿಕಾರಿ ಹಾಗೂ ಸಿಐಡಿ ಎಸ್ಪಿ ಲೋಕೇಶ್ ಬಿ. ಜಗಲಾಸರ್ ಅವರಿಗೆ ಪ್ರಕರಣದ ತನಿಖೆಯ ಹೊಣೆ ನೀಡಲಾಗಿದೆ.
ತನಿಖಾಧಿಕಾರಿಯಾಗಿ ಜವಾಬ್ದಾರಿ
ಮಂಗಳೂರಿನಲ್ಲಿ ಎಸ್ಐಟಿ ಮುಖ್ಯಸ್ಥ ಎನ್. ಶಶಿಕುಮಾರ್ ನೇತೃತ್ವದಲ್ಲಿ ನಡೆದ ಮೊದಲ ಸಭೆಯಲ್ಲಿ ಪ್ರಕರಣದ ಮುಂದಿನ ತನಿಖೆಯ ಕಾರ್ಯತಂತ್ರದ ಬಗ್ಗೆ ಚರ್ಚಿಸಲಾಗಿದೆ. ಹಿಂದಿನ ತನಿಖಾ ದಾಖಲೆಗಳು, ಸಾಕ್ಷ್ಯಗಳು ಹಾಗೂ ಮುಂದಿನ ತನಿಖೆಯ ಸ್ವರೂಪದ ಬಗ್ಗೆ ಚರ್ಚೆ ನಡೆಸಿದ ಬಳಿಕ ಲೋಕೇಶ್ ಜಗಲಾಸರ್ ಅವರಿಗೆ ತನಿಖಾಧಿಕಾರಿಯಾಗಿ ಜವಾಬ್ದಾರಿ ನೀಡಲಾಗಿದೆ.

ಮುಂದುವರಿಯಲಿರುವ ಪ್ರಕರಣದ ಮರುತನಿಖೆ
ಇನ್ನು ಲೋಕೇಶ್ ಜಗಲಾಸರ್ ಅವರಿಗೆ ಸಹಾಯಕ ತನಿಖಾಧಿಕಾರಿಯಾಗಿ ಮಂಗಳೂರು ಸಿಸಿಬಿ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರನ್ನು ನೇಮಿಸಲಾಗಿದೆ.
ಇದರೊಂದಿಗೆ ಐಪಿಎಸ್ ಹಾಗೂ ಕೆಎಸ್ಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಪ್ರಕರಣದ ಮರುತನಿಖೆ ಮುಂದುವರಿಯಲಿದೆ.
READ THIS : ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – 30 ಮೃತದೇಹಗಳ ಲೆಕ್ಕದಲ್ಲಿ ಭಾರೀ ವ್ಯತ್ಯಾಸ?

ಸದ್ಯ ಸಿಐಡಿಯಲ್ಲಿ ಎಸ್ಪಿಯಾಗಿ ಸೇವೆ ಸಲ್ಲಿಸುತ್ತಿರುವ ಲೋಕೇಶ್
ಲೋಕೇಶ್ ಬಿ. ಜಗಲಾಸರ್ ಈ ಹಿಂದೆ ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಎಸ್ಪಿಯಾಗಿ ಮತ್ತು ಬೆಂಗಳೂರು ನಗರದಲ್ಲಿ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಸಿಐಡಿಯಲ್ಲಿ ಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸೌಜನ್ಯ ಪ್ರಕರಣದ ಮರುತನಿಖೆ ನಡೆಸುವಂತೆ ಸೆಪ್ಟೆಂಬರ್ 21ರಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಇದರ ಬೆನ್ನಲ್ಲೇ ಸೆಪ್ಟೆಂಬರ್ 24ರಂದು ರಾಜ್ಯ ಸರ್ಕಾರ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿತ್ತು. ತಂಡದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಮರುತನಿಖೆ ಮತ್ತಷ್ಟು ವೇಗ
ಈಗ ತನಿಖಾಧಿಕಾರಿ ಹಾಗೂ ಸಹಾಯಕ ತನಿಖಾಧಿಕಾರಿಯ ನೇಮಕದೊಂದಿಗೆ ಸೌಜನ್ಯ ಪ್ರಕರಣದ ಮರುತನಿಖೆ ಮತ್ತಷ್ಟು ವೇಗ ಪಡೆದುಕೊಂಡಿದೆ.
ಹಿಂದಿನ ಸಿಐಡಿ ಹಾಗೂ ಸಿಬಿಐ ತನಿಖೆಯ ದಾಖಲೆಗಳು ಮತ್ತು ಲಭ್ಯ ಸಾಕ್ಷ್ಯಗಳನ್ನು ಪರಿಶೀಲಿಸಿ ಮುಂದಿನ ತನಿಖಾ ಕಾರ್ಯತಂತ್ರ ರೂಪಿಸಲಾಗುತ್ತಿದೆ.
MUST WATCH : ಮೀಟರ್ ಬಡ್ಡಿ ಸಾಲಕ್ಕೆ ವ್ಯಕ್ತಿ ಬಲಿ – ಸೆಲ್ಫಿ ವಿಡಿಯೋ ಮಾಡಿಟ್ಟು ಸೂಸೈ*





