
ವರಮಹಾಲಕ್ಷ್ಮಿ ಹಬ್ಬದಂದೇ Toxic ಅಡ್ವಾನ್ಸ್ ಬುಕಿಂಗ್ ಶುರು – 12 ಸಾವಿರ ಸ್ಕ್ರೀನ್ಗಳಲ್ಲಿ ʻರಾಕಿ ಭಾಯ್ʼ ಯಶ್ ಹವಾ!

ರಾಕಿ ಭಾಯ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಆಗಸ್ಟ್ 26ರಂದು ಜಾಗತಿಕ ಮಟ್ಟದಲ್ಲಿ ತೆರೆಕಾಣಲಿರುವ ಸಿನಿಮಾದ ಮುಂಗಡ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಆಗಸ್ಟ್ 21ರಂದು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಅಧಿಕೃತವಾಗಿ ಆರಂಭವಾಗಲಿದೆ. ಬಿಡುಗಡೆಗೆ ಐದು ದಿನಗಳ ಮೊದಲೇ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸಿರುವುದು ಯಶ್ ಅಭಿಮಾನಿಗಳಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ.

12 ಸಾವಿರಕ್ಕೂ ಹೆಚ್ಚು ಸ್ಕ್ರೀನ್ಗಳಲ್ಲಿ ‘ಟಾಕ್ಸಿಕ್’ ಅಬ್ಬರ
‘ಕೆಜಿಎಫ್ ಚಾಪ್ಟರ್ 2’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ಯಶ್ ಅಭಿನಯದ ಸಿನಿಮಾ ಆಗಿರುವುದರಿಂದ ‘ಟಾಕ್ಸಿಕ್’ ಮೇಲೆ ಜಾಗತಿಕ ಮಟ್ಟದಲ್ಲಿ ಭಾರೀ ನಿರೀಕ್ಷೆಯಿದೆ.
ಮೂಲಗಳ ಪ್ರಕಾರ, ಚಿತ್ರವನ್ನು ವಿಶ್ವದಾದ್ಯಂತ 12 ಸಾವಿರಕ್ಕೂ ಹೆಚ್ಚು ಸ್ಕ್ರೀನ್ಗಳಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ.
ಚಿತ್ರಕ್ಕೆ ಸಿಗುತ್ತಿರುವ ಬೇಡಿಕೆಯನ್ನು ಗಮನಿಸಿದರೆ, ಅಂತಿಮವಾಗಿ ಸ್ಕ್ರೀನ್ಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.
ಹೀಗಾಗಿ ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಓಪನಿಂಗ್ ಪಡೆಯುವ ನಿರೀಕ್ಷೆ ಗರಿಗೆದರಿದೆ.
RAED THIS : ಟಾಕ್ಸಿಕ್ ಸಿನಿಮಾ ಅಡ್ವಾನ್ಸ್ ಬುಕಿಂಗ್ ಬಗ್ಗೆ ಸಿಕ್ಕಿತು ಬಿಗ್ ಅಪ್ಡೇಟ್

ಯಾರು ವಿತರಣೆ ಮಾಡುತ್ತಿದ್ದಾರೆ?
ವೆಂಕಟ್ ಕೆ. ನಾರಾಯಣ ಅವರ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ಈ ಬಿಗ್ ಬಜೆಟ್ ಚಿತ್ರವನ್ನು ನಿರ್ಮಿಸಿವೆ. ಕರ್ನಾಟಕದಲ್ಲಿ ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ಚಿತ್ರದ ವಿತರಣೆಯ ಜವಾಬ್ದಾರಿ ವಹಿಸಿಕೊಂಡಿವೆ.
ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ದಿಲ್ ರಾಜು ಅವರ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್, ಉತ್ತರ ಭಾರತ ಹಾಗೂ ನೇಪಾಳದಲ್ಲಿ ಎಎ ಫಿಲ್ಮ್ಸ್, ಕೇರಳದಲ್ಲಿ ಪನೋರಮಾ ಫಿಲ್ಮ್ಸ್ ಹಾಗೂ ತಮಿಳುನಾಡಿನಲ್ಲಿ ಥಿಂಕ್ ಸ್ಟುಡಿಯೋಸ್ ಮತ್ತು ಟ್ರೈಡೆಂಟ್ ಆರ್ಟ್ಸ್ ಮೂಲಕ ಸಿನಿಮಾ ಬಿಡುಗಡೆಯಾಗಲಿದೆ. ವಿದೇಶಿ ಹಕ್ಕುಗಳನ್ನು ಫಾರ್ಸ್ ಫಿಲ್ಮ್ ಪಡೆದುಕೊಂಡಿದ್ದು, ಜಾಗತಿಕ ಇಂಗ್ಲಿಷ್ ಆವೃತ್ತಿಯ ಬಿಡುಗಡೆಗಾಗಿ ಲಯನ್ಸ್ಗೇಟ್ ಸಂಸ್ಥೆಯೊಂದಿಗೆ ಕೈಜೋಡಿಸಲಾಗಿದೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ‘ಟಾಕ್ಸಿಕ್’ ಜಾಗತಿಕ ಮಟ್ಟದಲ್ಲಿ ಏಕಕಾಲದಲ್ಲಿ ತೆರೆಗೆ ಬರಲಿದೆ.

ದೊಡ್ಡ ತಾರಾಬಳಗ
ಗೀತು ಮೋಹನ್ದಾಸ್ ನಿರ್ದೇಶನದ ಈ ಹೈ-ವೋಲ್ಟೇಜ್ ಗ್ಯಾಂಗ್ಸ್ಟರ್ ಕಥಾಹಂದರದ ಸಿನಿಮಾದಲ್ಲಿ ಬಹುಭಾಷಾ ತಾರೆಯರ ದೊಡ್ಡ ಬಳಗವೇ ಇದೆ.
ಯಶ್ ಜೊತೆಗೆ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್, ತಾರಾ ಸುತಾರಿಯಾ, ಅಕ್ಷಯ್ ಒಬೆರಾಯ್ ಹಾಗೂ ಸುದೇವ್ ನಾಯರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
MUST WATCH : ಸರ್ಕಾರದ ವಿರುದ್ಧ ಸಿಡಿದೆದ್ದ ನೌಕರರು – ತುಮಕೂರಲ್ಲಿ ಹಾಸ್ಟೆಲ್ ನೌಕರರ ಪ್ರೊಟೆಸ್ಟ್





