ಯಶ್ ಅವರ Toxic ಸಿನಿಮಾದ ಟೀಸರ್ ವಿರುದ್ಧ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ಇಂದು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದೆ.

ನಟ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಟೀಸರ್ನಲ್ಲಿ ಅಶ್ಲೀಲ ಹಾಗೂ ಪ್ರೌಢ ದೃಶ್ಯಗಳಿವೆ ಎಂಬ ಆರೋಪ ಕೇಳಿಬಂದಿದ್ದು, ಅವು ಮಹಿಳೆಯರು ಮತ್ತು ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡುತ್ತಿವೆ ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದೆ.
ʻಟಾಕ್ಸಿಕ್ʼ ಟೀಸರ್ ಬಗ್ಗೆ ʻಆಮ್ ಆದ್ಮಿʼ ಕೆಂಡಾಮಂಡಲ
ಇಂದು (ಜನವರಿ 12) ಬೆಂಗಳೂರಿನ ರಾಜ್ಯ ಮಹಿಳಾ ಆಯೋಗದ ಕಚೇರಿಗೆ ತೆರಳಿದ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದ ಸದಸ್ಯರು, Toxic ಚಿತ್ರದ ಟೀಸರ್ ಅನ್ನು ರದ್ದುಪಡಿಸಿ, ಅದರಲ್ಲಿ ಇರುವ ಅಶ್ಲೀಲ ದೃಶ್ಯಗಳನ್ನು ತಕ್ಷಣವೇ ತೆಗೆದುಹಾಕುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಕಚೇರಿಯಲ್ಲಿ ಇರದ ಹಿನ್ನೆಲೆಯಲ್ಲಿ, ಕಾರ್ಯದರ್ಶಿ ರೂಪಾ ಆರ್ ಅವರಿಗೆ ದೂರು ಸಲ್ಲಿಸಲಾಯಿತು.
ಇದನ್ನು ಓದಿ : Karwar|ಶೌಚಾಲಯ ಗೋಡೆ ಕೊರೆದು ಬ್ಯಾಂಕ್ ದರೋಡೆಗೆ ಯತ್ನ

ದೂರಿನಲ್ಲಿ ಏನಿದೆ?
ದೂರು ಪತ್ರದಲ್ಲಿ, “ಯಾವುದೇ ವಯೋಮಿತಿ ಅಥವಾ ಮುನ್ನೆಚ್ಚರಿಕೆ ಇಲ್ಲದೆ ಸಾರ್ವಜನಿಕವಾಗಿ ಬಿಡುಗಡೆ ಮಾಡಲಾದ ಟೀಸರ್ನಲ್ಲಿನ ದೃಶ್ಯಗಳು ಮಹಿಳೆಯರ ಘನತೆಗೆ ಧಕ್ಕೆ ತರುತ್ತಿದ್ದು, ಅಪ್ರಾಪ್ತ ವಯಸ್ಕರ ಮೇಲೆ ದುಷ್ಪರಿಣಾಮ ಬೀರುತ್ತಿವೆ.
ಇದು ಕನ್ನಡದ ಸಾಂಸ್ಕೃತಿಕ ಜಗತ್ತಿಗೆ ಮಾಡುತ್ತಿರುವ ಅವಮಾನವಾಗಿದೆ,” ಎಂದು ಉಲ್ಲೇಖಿಸಲಾಗಿದೆ. ಟೀಸರ್ ಅನ್ನು ತಕ್ಷಣವೇ ರದ್ದುಪಡಿಸಿ ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮಹಿಳಾ ಆಯೋಗವನ್ನು ಒತ್ತಾಯಿಸಲಾಗಿದೆ.

ನಿಮಗೆ ನಾಚಿಕೆ ಆಗಲ್ವಾ?
ಇದೇ ವೇಳೆ, ಟಾಕ್ಸಿಕ್ ಚಿತ್ರವನ್ನು ಮಲಯಾಳಂ ನಿರ್ದೇಶಕಿ ಗೀತು ಮೋಹನ್ದಾಸ್ ನಿರ್ದೇಶಿಸಿರುವುದಕ್ಕೂ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದು, “ಈ ರೀತಿಯ ದೃಶ್ಯಗಳನ್ನು ತೆಗೆಯುವಾಗ ನಿಮಗೆ ನಾಚಿಕೆ ಆಗಲ್ವಾ?” ಎಂದು ಆಕ್ರೋಶ ಹೊರಹಾಕಿದ್ದಾರೆ.
ಟಾಕ್ಸಿಕ್ ಟೀಸರ್ ಕುರಿತ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಮಹಿಳಾ ಆಯೋಗದ ಮುಂದಿನ ಕ್ರಮದತ್ತ ಗಮನ ಕೇಂದ್ರೀಕೃತವಾಗಿದೆ.

ಇದನ್ನು ನೋಡಿ : ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿಯ ದಾರುಣ ಸಾ*ವು – ಮೃತ ವ್ಯಕ್ತಿಯ ಪತ್ತೆಗೆ ಮುಂದಾದ ರೈಲ್ವೆ ಪೊಲೀಸರು




