Accident : ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್ – 6 ಮಂದಿ ದಾರುಣ ಸಾವು̤

ಕೊಪ್ಪಳದ ಹುಲಿಗೆಮ್ಮ ದೇವಾಲಯಕ್ಕೆ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ತುಂಗಭದ್ರಾ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಚಿಕ್ಕ ಮಕ್ಕಳು ಸೇರಿದಂತೆ ಆರು ಮಂದಿ ಮೃತಪಟ್ಟ ಘಟನೆ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.

5 ಲಕ್ಷ ರೂ. ಪರಿಹಾರ ಘೋಷಣೆ
ಘಟನೆಯಲ್ಲಿ ಆರು ಮಂದಿ ಮೃತಪಟ್ಟ ಸುದ್ದಿ ದುಃಖ ತಂದಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದಿಂದ ತಲಾ ರೂ. 5 ಲಕ್ಷ ಪರಿಹಾರ ಘೋಷಿಸಲಾಗಿದ್ದು, ಸಂಕಷ್ಟದ ಸಮಯದಲ್ಲಿ ಸರ್ಕಾರ ಸಂತ್ರಸ್ತ ಕುಟುಂಬಗಳ ಪರವಾಗಿ ನಿಲ್ಲಲಿದೆ.
READ THIS : ವೀಕ್ಷಕರ ಸಂಖ್ಯೆ ಹೆಚ್ಚಳ – ದಾಖಲೆ ಬರೆದ ಜಿಯೋಸ್ಟಾರ್

Accident – ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ
ಮೃತಪಟ್ಟವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ” ಎಂದು ಪ್ರಾರ್ಥಿಸಿದ್ದಾರೆ.

MUST WATCH : MODI ಕರೆಯನ್ನ ಫಾಲೋ ಮಾಡಿದ VIJAYENDRA – ಕಾರು ಬಿಟ್ಟು METROದಲ್ಲಿ ಪ್ರಯಾಣಿಸಿದ್ರು




