ಬೆಂಗಳೂರು Metro ನೇರಳೆ ಮಾರ್ಗದಲ್ಲಿ ಭಾನುವಾರ ಬೆಳಿಗ್ಗೆ 7ರಿಂದ 9ರವರೆಗೆ ತಾತ್ಕಾಲಿಕ ಸಂಚಾರ ವ್ಯತ್ಯಯ ಉಂಟಾಗಲಿದೆ. ಯಾವ ನಿಲ್ದಾಣಗಳ ನಡುವೆ ಸೇವೆ ಸ್ಥಗಿತವಾಗಲಿದೆ ಎಂಬ ಮಾಹಿತಿ ಇಲ್ಲಿದೆ

ಬೆಂಗಳೂರು Metro ನೇರಳೆ ಮಾರ್ಗದಲ್ಲಿ ಈ ಭಾನುವಾರ ಬೆಳಿಗ್ಗೆ ತಾತ್ಕಾಲಿಕ ಸಂಚಾರ ವ್ಯತ್ಯಯ ಉಂಟಾಗಲಿದೆ. ಸುರಕ್ಷತೆ ಮತ್ತು ಅಗತ್ಯ ತಾಂತ್ರಿಕ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ತಿಳಿಸಿದೆ. ಅತ್ತಿಗುಪ್ಪೆ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವೆ ನಡೆಯುವ ಕಾಮಗಾರಿಯಿಂದಾಗಿ ಈ ವ್ಯತ್ಯಯ ಉಂಟಾಗಲಿದೆ.
MUST READ : Siddaramaiah ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್..!!

ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ದೀಪಾಂಜಲಿನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಮೆಜೆಸ್ಟಿಕ್) ನಿಲ್ದಾಣಗಳ ನಡುವೆ ರೈಲು ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ಆದರೆ ಈ ಅವಧಿಯಲ್ಲಿ ನೇರಳೆ ಮಾರ್ಗದ ಚಲ್ಲಘಟ್ಟದಿಂದ ಮೈಸೂರು ರಸ್ತೆವರೆಗೆ ಹಾಗೂ ಕೆಂಪೇಗೌಡ ನಿಲ್ದಾಣದಿಂದ ವೈಟ್ಫೀಲ್ಡ್ವರೆಗೆ ಮೆಟ್ರೋ ಸೇವೆ ಎಂದಿನಂತೆ ಮುಂದುವರಿಯಲಿದೆ.

ಇದೇ ರೀತಿ ಹಸಿರು ಮಾರ್ಗ (ಮಾದಾವರದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ) ಮತ್ತು ಹಳದಿ ಮಾರ್ಗ (ಆರ್.ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ) ಸಂಚಾರದಲ್ಲಿ ಯಾವುದೇ ಅಡ್ಡಿ ಇರುವುದಿಲ್ಲ. ಬೆಳಿಗ್ಗೆ 9 ಗಂಟೆಯ ನಂತರ ಕಾಮಗಾರಿ ಪೂರ್ಣಗೊಂಡ ಬಳಿಕ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಮತ್ತೆ ಸಾಮಾನ್ಯವಾಗಲಿದೆ.
MUST WATCH : ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪ ಇನ್ನಿಲ್ಲ




