
Chamarajanagara : ಗಣೇಶ ತರಲು ಹೋಗಿದ್ದ ಮೂವರು ದಾರುಣ ಸಾವು!
ಅಪರಿಚಿತ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ Chamarajanagara ಜಿಲ್ಲೆಯ ಹನೂರು ಪಟ್ಟಣದ ಹೊರವಲಯದ ಹುಲಸುಗುಡ್ಡೆ ಬಳಿ ನಿನ್ನೆ ಸಂಜೆ ನಡೆದಿದೆ. ಮೃತರನ್ನು ಹನೂರು ತಾಲ್ಲೂಕಿನ ಕೊಪ್ಪ ಗ್ರಾಮದ ನಿವಾಸಿಗಳಾದ ಮಹೇಂದ್ರ (35), ಸುರೇಶ್ (24) ಹಾಗೂ ಮುನಿಯಪ್ಪ (35) ಎಂದು ಗುರುತಿಸಲಾಗಿದೆ.
ಗಣೇಶ ಮೂರ್ತಿ ತರಲು ತೆರಳಿದ್ದ ವೇಳೆ ದುರಂತ
ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೊಳ್ಳೇಗಾಲದಲ್ಲಿರುವ ಸ್ನೇಹಿತರ ಬಳಿ ತೆರಳಿ ಗಣೇಶ ಮೂರ್ತಿಯನ್ನು ತರಲು ಮೂವರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಮೈಸೂರಿನಿಂದ ಮಲೆ ಮಹದೇಶ್ವರ ಬೆಟ್ಟದತ್ತ ತೆರಳುತ್ತಿದ್ದ ಅಪರಿಚಿತ ಕಾರೊಂದು ಬೈಕ್ಗೆ ಡಿಕ್ಕಿ ಹೊಡಿದಿದೆ.
ಇನ್ನು ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳನ್ನು ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.
READ THIS : ಕರ್ತವ್ಯದ ಮೇಲಿದ್ದಾಗಲೇ ಹೃದಯಾಘಾತದಿಂದ ಮುಖ್ಯ ಶಿಕ್ಷಕ ಸಾವು!

Chamarajanagara Accident – ಸ್ಥಳಕ್ಕೆ ಪೊಲೀಸರ ಭೇಟಿ
ಘಟನಶ ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ನಡೆಸಿದ್ದು, ಮುಂದಿನ ಕಾನೂನು ಕ್ರಮಕೈಗೊಂಡು ತನಿಖೆ ಆರಂಭಿಸಿದ್ದಾರೆ.
MUST WATCH : ವಿದ್ಯುತ್ ಇಲ್ಲ.. ಲೋ-ವೋಲ್ಟೇಜ್ ಕಾಟ – BESCOM ಕಚೇರಿಗೆ ನುಗ್ಗಿ ರೈತರ ಆಕ್ರೋಶ.!




