
Plane Crash : ಕಾನ್ಪುರದಲ್ಲಿ ತರಬೇತಿ ವಿಮಾನ ಪತನ – ಕರ್ನಾಟಕದ ಪೈಲಟ್ ಸೇರಿ ಇಬ್ಬರು ದುರ್ಮರಣ
Plane Crash : ತರಬೇತಿ ವಿಮಾನವೊಂದು ಪತನಗೊಂಡ ಪರಿಣಾಮ ಕರ್ನಾಟಕದ ಪೈಲಟ್ ಸೇರಿದಂತೆ ಇಬ್ಬರು ಪೈಲಟ್ಗಳು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಗುರುವಾರ ನಡೆದಿದೆ.
ತರಬೇತಿ ವಿಮಾನ ಅಪಘಾತ
ಕಾನ್ಪುರದ ಗಂಗಾ ನದಿ ತೀರದ ಸಮೀಪದ ಹೊಲವೊಂದರಲ್ಲಿ ವಿಮಾನ ಪತನಗೊಂಡಿದೆ. ಕಾನ್ಪುರದ ಗಾರ್ಗ್ ಏವಿಯೇಷನ್ ತರಬೇತಿ ಕೇಂದ್ರದಿಂದ ಬೆಳಗ್ಗೆ 11.30ರ ಸುಮಾರಿಗೆ ಟ್ವಿನ್ ಎಂಜಿನ್ ಹೊಂದಿರುವ ನಾಲ್ಕು ಆಸನಗಳ ತರಬೇತಿ ವಿಮಾನ ಟೇಕ್ಆಫ್ ಆಗಿತ್ತು. ತರಬೇತಿ ಕೇಂದ್ರಕ್ಕೆ ವಾಪಸ್ ಆಗುತ್ತಿದ್ದ ವೇಳೆ ಬೆಳಗ್ಗೆ 11.50ರ ಸುಮಾರಿಗೆ ವಿಮಾನ ನಿಯಂತ್ರಣ ಕಳೆದುಕೊಂಡು ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ಅಭಿಷೇಕ್ ಪೂಜಾರಿ ಸೇರಿ ಇಬ್ಬರು ಸಾವು
ವಿಮಾನದಲ್ಲಿದ್ದ ಇಬ್ಬರಲ್ಲಿ ಒಬ್ಬರು ತರಬೇತಿ ಪಡೆಯುತ್ತಿದ್ದ ಪೈಲಟ್ ಹಾಗೂ ಮತ್ತೊಬ್ಬರು ತರಬೇತಿ ನೀಡುತ್ತಿದ್ದ ಇನ್ಸ್ಟ್ರಕ್ಟರ್ ಆಗಿದ್ದರು. ಮೃತರನ್ನು ಗುಜರಾತ್ನ ಸಚಿನ್ ಭಾಟಿಯಾ ಹಾಗೂ ಕರ್ನಾಟಕದ ಅಭಿಷೇಕ್ ಪೂಜಾರಿ ಎಂದು ಗುರುತಿಸಲಾಗಿದೆ. ಪೊಲೀಸ್ ಅಧಿಕಾರಿಗಳ ಮಾಹಿತಿ ಪ್ರಕಾರ, ವಿಮಾನದಲ್ಲಿದ್ದ ಇನ್ಸ್ಟ್ರಕ್ಟರ್ಗೆ ಸುಮಾರು 3,000 ಗಂಟೆಗಳ ಹಾರಾಟದ ಅನುಭವವಿತ್ತು.
READ THIS : ಚಿಕ್ಕಬಳ್ಳಾಪುರದಲ್ಲಿ ಅಮೆರಿಕದ B-1B ಲ್ಯಾನ್ಸರ್ ಬಾಂಬರ್ ಹಾರಾಟ!

ಸಂಪೂರ್ಣ ನಜ್ಜುಗುಜ್ಜಾದ ವಿಮಾನ
ವಿಮಾನ ಪತನದ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ತುರ್ತು ಸೇವಾ ಸಿಬ್ಬಂದಿ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಶೀಲನಾ ಕಾರ್ಯ ಆರಂಭಿಸಿದರು. ಅಪಘಾತದ ಸ್ಥಳದಲ್ಲಿ ವಿಮಾನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಲೋಹದ ಭಾಗಗಳು ಹಾಗೂ ರೆಕ್ಕೆಗಳು ಮುರಿದು ಚದುರಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ವಿಮಾನ ನಿಯಂತ್ರಣ ಕಳೆದುಕೊಂಡ ಬಳಿಕ ಪತನಗೊಂಡಿದೆ ಎಂದು ಅಧಿಕಾರಿಗಳು ಪ್ರಾಥಮಿಕವಾಗಿ ತಿಳಿಸಿದ್ದಾರೆ. ಆದರೆ ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
MUST WATCH : ಬಿಜೆಪಿಗರು ಸದನ ಸಮಯ ವ್ಯರ್ಥ ಮಾಡಿದ್ರು – BJP ವಿರುದ್ದ H.K.PATIL ಗರಂ




