
Darshan ಗೆ ಸಂಕಷ್ಟ – ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್ ಆದೇಶ
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಸೆ.28ಕ್ಕೆ ಕೋರ್ಟ್ ದಿನಾಂಕ ನಿಗದಿ ಮಾಡಿದೆ. ಪ್ರದೂಷ್ರನ್ನು ಮಾಫಿ ಸಾಕ್ಷಿಯಾಗಿ ದಾಖಲಿಸುವುದನ್ನು ಪ್ರಶ್ನಿಸಿ ನಟ Darshan ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಬೆನ್ನಲ್ಲೇ, 59ನೇ ಸಿಸಿಹೆಚ್ ನ್ಯಾಯಾಲಯ ಈ ಕ್ರಮಕ್ಕೆ ಮುಂದಾಗಿದೆ.
READ THIS : ರೇಣುಕಾಸ್ವಾಮಿ ಕೇಸ್ – ನಟ ದರ್ಶನ್ಗೆ ಇಂದು ಬಿಗ್ ಡೇ!

ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದೇನು?
ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ದರ್ಶನ್ ಪರ ವಕೀಲರು ನಿರ್ಧರಿಸಿದ್ದಾರೆ. ಈ ಕುರಿತು ವಿಚಾರಣಾ ನ್ಯಾಯಾಲಯಕ್ಕೂ ವಕೀಲರು ಮಾಹಿತಿ ನೀಡಿದ್ದಾರೆ. ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸುವ ಹಿನ್ನೆಲೆಯಲ್ಲಿ ಪ್ರದೂಷ್ ಅವರ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಮುಂದೂಡುವಂತೆ ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಆದರೆ ಈ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

Darshan ಗೆ ಸಂಕಷ್ಟ – ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಆದೇಶ
ಸುಪ್ರೀಂ ಕೋರ್ಟ್ ವಿಚಾರಣೆಗೆ ಸಮಯದ ಮಿತಿ (ಟೈಂ ಬಾಂಡ್) ನಿಗದಿಪಡಿಸಿರುವುದರಿಂದ, ನಿಗದಿತ ದಿನಾಂಕವನ್ನು ಮುಂದೂಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಹೀಗಾಗಿ ಸೆಪ್ಟೆಂಬರ್ 28ರಂದು ಪ್ರದೂಷ್ ಅವರ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸುವ ಪ್ರಕ್ರಿಯೆ ನಡೆಯಲಿದ್ದು, ಪ್ರಕರಣದ ಮುಂದಿನ ಕಾನೂನು ಕ್ರಮಗಳತ್ತ ಇದೀಗ ಗಮನ ನೆಟ್ಟಿದೆ.
MUST WATCH : ಕ್ಲಾಸ್ ರೂಮಲ್ಲೇ ಚುನಾವಣಾ ಪ್ರಚಾರ ಶಿಕ್ಷಕರನ್ನ ಕೂರಿಸಿ ಮತ ಕೇಳಿದ್ರಾ





