
ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಮಾಜಿ ಶಾಸಕ Preetham Gowda ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ

ಮಾಜಿ ಶಾಸಕ ಪ್ರೀತಂ ಗೌಡಗೆ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಶಾಸಕರಾಗಿದ್ದ ಅವಧಿಯಲ್ಲಿ ಅಕ್ರಮವಾಗಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಹಾಸನ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದೆ.
ವಿಚಾರಣೆಯನ್ನು ಅಕ್ಟೋಬರ್ 22ಕ್ಕೆ ಮುಂದೂಡಿಕೆ
ವಕೀಲ ಬಿ.ಪಿ. ಸಂದೀಪ್ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಬಿ. ಶಿವಪ್ರಸಾದ್, ಪ್ರಕರಣದ ಕುರಿತು ಮರುತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 22ಕ್ಕೆ ಮುಂದೂಡಲಾಗಿದೆ.
RAED THIS : ಜನರ ಆರೋಗ್ಯದ ಜೊತೆ ಚೆಲ್ಲಾಟವಾಡ್ತಿದೆ ನಕಲಿ ಔಷಧ ಜಾಲ..!

5 ವರ್ಷದಲ್ಲಿ ಆಸ್ತಿಯಲ್ಲಿ ಭಾರಿ ಏರಿಕೆ ಆರೋಪ
Preetham Gowda ಅವರು 2018 ಮತ್ತು 2023ರ ವಿಧಾನಸಭಾ ಚುನಾವಣೆಗಳ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಆಸ್ತಿ ವಿವರಗಳ ಪ್ರಮಾಣಪತ್ರಗಳಲ್ಲಿ ಭಾರಿ ವ್ಯತ್ಯಾಸವಿದೆ ಎಂದು ದೂರುದಾರರು ಆರೋಪಿಸಿದ್ದರು.
ಕೇವಲ ಐದು ವರ್ಷಗಳ ಅವಧಿಯಲ್ಲಿ ಅವರ ಒಟ್ಟು ಆಸ್ತಿಯ ಮೌಲ್ಯ ಸುಮಾರು 10 ಪಟ್ಟು ಹೆಚ್ಚಾಗಿದೆ ಎಂದು ಆರೋಪಿಸಲಾಗಿದ್ದು,
ಈ ಅಸಹಜ ಆಸ್ತಿ ಏರಿಕೆಯ ಕುರಿತು ಸಮಗ್ರ ತನಿಖೆ ನಡೆಸುವಂತೆ ಸಂದೀಪ್ ಅವರು ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು.
ಲೋಕಾಯುಕ್ತದ ಬಿ-ರಿಪೋರ್ಟ್ಗೆ ಆಕ್ಷೇಪ
ಖಾಸಗಿ ದೂರಿನ ಆಧಾರದ ಮೇಲೆ ಈ ಹಿಂದೆ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಆರೋಪಗಳಿಗೆ ಸೂಕ್ತ ಆಧಾರಗಳಿಲ್ಲ ಎಂದು ಹೇಳಿ ಪ್ರೀತಂ ಗೌಡ ಪರವಾಗಿ ‘ಬಿ-ರಿಪೋರ್ಟ್’ ಸಲ್ಲಿಸಿದ್ದರು.
ಆದರೆ ಲೋಕಾಯುಕ್ತದ ಈ ವರದಿಯನ್ನು ಪ್ರಶ್ನಿಸಿ ದೂರುದಾರ ಬಿ.ಪಿ. ಸಂದೀಪ್ ಅವರು ನ್ಯಾಯಾಲಯದಲ್ಲಿ ಪ್ರತಿಭಟನಾ ಅರ್ಜಿ (Protest Petition) ಸಲ್ಲಿಸಿದ್ದರು. ಅರ್ಜಿಯ ಕುರಿತು ಸುದೀರ್ಘ ವಿಚಾರಣೆ ನಡೆಸಿದ ಬಳಿಕ ನ್ಯಾಯಾಲಯವು ಲೋಕಾಯುಕ್ತ ಪೊಲೀಸರ ಬಿ-ರಿಪೋರ್ಟ್ ಅನ್ನು ಬದಿಗೊತ್ತಿದೆ.

ಇದೀಗ ಪ್ರಕರಣದ ಆರೋಪಗಳ ಕುರಿತು ಮರುತನಿಖೆ ನಡೆಸಿ ಸಮಗ್ರ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಲಾಗಿದೆ.
MUST WATCH : MALAYALAM BANNERನಿಂದ ವಿವಾದ – ಕಾಲೇಜಿಗೆ ನುಗ್ಗಿದ ಕರವೇ ಕಾರ್ಯಕರ್ತರು





