Tumakuru ನ ಪಾವಗಡದಲ್ಲಿ ಹೊಸ ಬೈಕ್ ಖರೀದಿಸಿದ ಮರುದಿನವೇ ಟಿಪ್ಪರ್ ಡಿಕ್ಕಿಯಾಗಿ 19 ವರ್ಷದ ಯುವಕ ಮೃತಪಟ್ಟಿದ್ದಾನೆ.

Tumakuru ಜಿಲ್ಲೆಯ ಪಾವಗಡ ತಾಲೂಕಿನ ಗಂಗಸಾಗರ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹೊಸ ಬೈಕ್ ಖರೀದಿಸಿದ ಮರುದಿನವೇ 19 ವರ್ಷದ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದೇ ವೇಳೆ ಧಾರವಾಡ ಜಿಲ್ಲೆಯಲ್ಲೂ ನಡೆದ ಮತ್ತೊಂದು ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ರಾಜ್ಯದಲ್ಲಿ ರಸ್ತೆ ಸುರಕ್ಷತೆ ಕುರಿತು ಮತ್ತೆ ಆತಂಕ ಮೂಡಿಸಿದೆ.

ಮೃತ ಯುವಕನನ್ನು ಪಾವಗಡ ತಾಲೂಕಿನ ದೊಡ್ಡಹಳ್ಳಿ ನಿವಾಸಿ ನಂದೀಶ್ ಕುಮಾರ್ (19) ಎಂದು ಗುರುತಿಸಲಾಗಿದೆ. ನಂದೀಶ್ ಕುಮಾರ್ ನಿನ್ನೆಯಷ್ಟೇ ಹೊಸ ಬೈಕ್ ಖರೀದಿಸಿದ್ದು, ಸ್ನೇಹಿತನೊಂದಿಗೆ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಗಂಗಸಾಗರ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ವೈಎನ್ ಹೊಸಕೋಟೆ ಕಡೆಯಿಂದ ಅತಿವೇಗವಾಗಿ ಬಂದ ಟಿಪ್ಪರ್ ಲಾರಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ನಂದೀಶ್ ಕುಮಾರ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
MUST READ : ಹೆಚ್ಡಿಕೆ ಬಳಿ 60ಕ್ಕೂ ಹೆಚ್ಚು ದುಬಾರಿ ವಾಚ್ಗಳಿವೆ ಎಂದ ಪ್ರದೀಪ್ ಈಶ್ವರ್

ಅಪಘಾತದ ವೇಳೆ ಬೈಕ್ನ ಹಿಂಬದಿ ಸವಾರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆ ಸಂಬಂಧ ಪಾವಗಡ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಹೊಸ ಬೈಕ್ ಖರೀದಿಸಿದ ಸಂತಸದ ಕ್ಷಣ ಮರುದಿನವೇ ದುರಂತವಾಗಿ ಬದಲಾಗಿರುವುದು ಕುಟುಂಬದವರ ಆಕ್ರಂದನಕ್ಕೆ ಕಾರಣವಾಗಿದೆ.
MUST WATCH : ಮಧುಗಿರಿಯಲ್ಲಿ ಅಪರೂಪದ ಜೀವಿ ಪ್ರತ್ಯಕ್ಷ ಗ್ರಾಮಸ್ಥರ ಭಯಕ್ಕೆ ಬ ಯಾದ ಪ್ಯಾಂಗೊಲಿನ್




