ತುಮಕೂರು ದಸರಾಗೆ ಅದ್ಧೂರಿ ಚಾಲನೆ – ಧ್ವಜಾರೋಹಣ ನೆರವೇರಿಸಿದ DCM

ಕಲ್ಪತರು ನಾಡು ತುಮಕೂರಿನಲ್ಲಿ ದಸರಾ ಸಂಭ್ರಮ ಮನೆಮಾಡಿದೆ. ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ತುಮಕೂರು ದಸರಾ ವೈಭವ-2026ಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಹೌದು.. ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ವಿವಿಧ ಮಠಾಧೀಶರು ಧ್ವಜಾರೋಹಣ ನೆರವೇರಿಸುವ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ರು. ಧಾರ್ಮಿಕ ವಿಧಿವಿಧಾನಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ದಸರಾ ಸಂಭ್ರಮಕ್ಕೆ ಅಧಿಕೃತವಾಗಿ ಚಾಲನೆ ದೊರೆಯಿತು.
ತುಮಕೂರು ದಸರಾ ಲೋಗೋ, ಕನ್ನಡ ಬಾವುಟ ಧ್ವಜಾರೋಹಣ
ಹೌದು.. ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ತುಮಕೂರು ದಸರಾ ಲೋಗೋ ಹಾಗೂ ಕನ್ನಡದ ಬಾವುಟವನ್ನು ಧ್ವಜಾರೋಹಣ ಮಾಡಲಾಯ್ತು. ಈ ವೇಳೆ ಶ್ರೀ ಹನುಮಂತನಾಥ ಸ್ವಾಮೀಜಿ ಹಾಗೂ ಕಾರದ ಮಠದ ಶ್ರೀ ವೀರಬಸವ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ರು. ಧ್ವಜಾರೋಹಣದೊಂದಿಗೆ ದಸರಾ ಮಹೋತ್ಸವದ ಸಂಭ್ರಮಕ್ಕೆ ವಿಧ್ಯುಕ್ತ ಚಾಲನೆ ನೀಡಲಾಯ್ತು.

ಪತ್ನಿ ಕನ್ನಿಕಾ ಜೊತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ
ಇನ್ನು ಧ್ವಜಾರೋಹಣದ ಬಳಿಕ DCM ಡಾ. ಜಿ. ಪರಮೇಶ್ವರ್ ತಮ್ಮ ಪತ್ನಿ ಕನ್ನಿಕಾ ಪರಮೇಶ್ವರ್ ಅವರೊಂದಿಗೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಭಿಷೇಕ ಹಾಗೂ ಪೂಜೆ ಸಲ್ಲಿಸಿದ್ರು. ಬಳಿಕ ನಡೆದ ಗಣಹೋಮದಲ್ಲಿಯೂ ದಂಪತಿ ಭಾಗವಹಿಸಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದ್ರು. ಈ ಮೂಲಕ ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಿತು.
ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಧಿಕೃತ ಚಾಲನೆ
ಇನ್ನು ಜೂನಿಯರ್ ಕಾಲೇಜು ಮೈದಾನದಲ್ಲಿ ನಿರ್ಮಿಸಿರುವ ಅಮರಶಿಲ್ಪಿ ಜಕಣಾಚಾರಿ ಸಾಂಸ್ಕೃತಿಕ ವೇದಿಕೆಯಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯ್ತು.
ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸಾಂಸ್ಕೃತಿಕ ವೈಭವಕ್ಕೂ ವೇದಿಕೆ ಸಜ್ಜಾಗಿದ್ದು, TUMAKURU DASARA ಮಹೋತ್ಸವಕ್ಕೆ ವಿಶೇಷ ಮೆರುಗು ನೀಡಿದೆ.
READ THIS : Dance by Mahesh College Students ದಸರಾ ಅಂಗವಾಗಿ ಮಹೇಶ್ ಕಾಲೇಜು ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ

ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ದಸರಾ ವೈಭವ
ಇನ್ನು ಕಾರ್ಯಕ್ರಮದಲ್ಲಿ ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್, ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್, ತಿಪಟೂರು ಶಾಸಕ ಕೆ. ಷಡಕ್ಷರಿ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಹಾಗೂ ಮಾಜಿ ಶಾಸಕ ಗೌರಿಶಂಕರ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಭಾಗವಹಿಸಿದ್ರು. ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಸಿದ್ದರಬೆಟ್ಟದ ಶಿವಾಚಾರ್ಯ ಶ್ರೀಗಳು ಹಾಗೂ ಕಾರದ ಮಠದ ಶ್ರೀ ವೀರಬಸವ ಸ್ವಾಮೀಜಿ ಕಾರ್ಯಕ್ರಮಕ್ಕೆ ಸಾನ್ನಿಧ್ಯ ವಹಿಸಿದ್ರು.
ದಸರಾ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಭಾಗಿ
ಇನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಅಶ್ವಿಜಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಸೇರಿದಂತೆ ಹಲವು ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ರು.

ಒಟ್ಟಿನಲ್ಲಿ ತುಮಕೂರು ದಸರಾ ವೈಭವ-2026ಕ್ಕೆ ಅದ್ಧೂರಿ ಚಾಲನೆ ದೊರೆತಿದ್ದು, ಧ್ವಜಾರೋಹಣ, ಚಾಮುಂಡೇಶ್ವರಿ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ದಸರಾ ಮಹೋತ್ಸವ ಆರಂಭವಾಗಿದೆ.
MUST WATCH : ತುಮಕೂರಿನಲ್ಲಿ ಅದ್ದೂರಿ ದಸರಾ ಭದ್ರತೆ ಬಗ್ಗೆ ಎಸ್ಪಿ ಹೇಳಿದ್ದೇನು





