Tumakuru : ಲೋ ಬಿಪಿಯಿಂದ ಕುಸಿದು ಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವು!

ಲೋ ಬಿಪಿಯಿಂದ ಕುಸಿದು ಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ದಾರುಣ ಘಟನೆ Tumakuru ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ನಡೆದಿದೆ.
8 ನೇ ತರಗತಿ ವಿದ್ಯಾರ್ಥಿ ಸಾವು!
ಮೃತ ವಿದ್ಯಾರ್ಥಿನಿಯನ್ನು ಪ್ರಿಯಾಂಕಾ (14) ಎಂದು ಗುರುತಿಸಲಾಗಿದೆ. ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದ ಕಸ್ತೂರಿಬಾ ಗಾಂಧಿ ಬಾಲಕಿಯರ ವಸತಿ ನಿಲಯದಲ್ಲಿದ್ದ ಪ್ರಿಯಾಂಕ, ತ್ರಿಯಂಬಕೇಶ್ವರ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಇದನ್ನು ಓದಿ : ಅಡಿಕೆ ಕೀಳುವಾಗ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

ಆಗಿದ್ದೇನು?
ಕಾರಗಾನಹಟ್ಟಿ ಗ್ರಾಮದ ನರಸಿಂಹಮೂರ್ತಿ ಮತ್ತು ಶಾರದಮ್ಮ ದಂಪತಿಯ ಪುತ್ರಿಯಾಗಿರುವ ಪ್ರಿಯಾಂಕಾ, ಕಳೆದ ಒಂದು ವಾರದಿಂದ ಅನಾರೋಗ್ಯದ ಕಾರಣ ಊರಿಗೆ ತೆರಳಿದ್ದಳು. ಬಳಿಕ ಆಗಸ್ಟ್ 7ರಂದು ಮತ್ತೆ ವಸತಿ ನಿಲಯಕ್ಕೆ ಮರಳಿದ್ದಳು. ನಿನ್ನೆ ಬೆಳಗ್ಗೆ ಹಾಸ್ಟೆಲ್ನ ಶೌಚಾಲಯಕ್ಕೆ ತೆರಳಿದ್ದ ವೇಳೆ ಪ್ರಿಯಾಂಕಾ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾಳೆ. ಲೋ ಬಿಪಿಯಿಂದ ಆಕೆ ಅಸ್ವಸ್ಥಗೊಂಡಿರುವುದು ತಿಳಿದುಬಂದಿದ್ದು, ಕೂಡಲೇ ಹಾಸ್ಟೆಲ್ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಅಸ್ಪತ್ರೆಗೆ ಬಾಲಕಿಯನ್ನು ಕರೆತರುವ ಮುನ್ನವೇ ಸಾವನ್ನಪ್ಪಿದ್ದಾಳೆ
ಘಟನೆ ಕುರಿತು ಮಾಹಿತಿ ಪಡೆದ ಪಾವಗಡ ಗ್ರಾಮಾಂತರ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.

ಇದನ್ನು ನೋಡಿ : ಮೈ ಜುಮ್ಮೆನಿಸುವ MURUGAN ಜಾತ್ರೆ – ಬೆನ್ನಿಗೆ ಕಬ್ಬಿಣದ ಕೊಂಡಿ ಹಾಕಿ ಸಾಹಸ




