Tumakuru ಜಿಲ್ಲೆಯ ಕೊರಟಗೆರೆ ತಾಲೂಕಿನ ದಾಸಲುಕುಂಟೆಯಲ್ಲಿ ವಾಕಿಂಗ್ಗೆ ತೆರಳಿದ್ದ 74 ವರ್ಷದ ರತ್ನಮ್ಮ ಭೀಕರವಾಗಿ ಹತ್ಯೆಯಾಗಿದ್ದಾರೆ.

Tumakuru ಜಿಲ್ಲೆಯ ಕೊರಟಗೆರೆ ತಾಲೂಕಿನ ಸಿಎನ್ ದುರ್ಗ ಹೋಬಳಿಯ ದಾಸಲುಕುಂಟೆ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ವಾಕಿಂಗ್ಗೆ ತೆರಳಿದ್ದ 74 ವರ್ಷದ ವೃದ್ಧೆ ಭೀಕರವಾಗಿ ಹತ್ಯೆಯಾಗಿದ್ದಾರೆ. ಈ ಘಟನೆ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ.
ಮೃತ ವೃದ್ಧೆ ಯಾರು?
ಕೊಲೆಯಾದ ವೃದ್ಧೆಯನ್ನು ರತ್ನಮ್ಮ (74) ಎಂದು ಗುರುತಿಸಲಾಗಿದೆ. ಮೂರು ವರ್ಷಗಳ ಹಿಂದೆ ಪತಿ ಮುದ್ದಬಸಪ್ಪ ಅವರನ್ನು ಕಳೆದುಕೊಂಡಿದ್ದ ರತ್ನಮ್ಮ, ಸೊಸೆ ಭಾಗ್ಯಮ್ಮ ಅವರೊಂದಿಗೆ ವಾಸವಾಗಿದ್ದರು.
MUST READ : ಲಿವ್ ಇನ್ ಗೆಳತಿಯ ಕತ್ತು ಹಿಸುಕಿ ಕೊಂದ ಪ್ರಿಯಕರ!

ಘಟನೆ ಹೇಗೆ ನಡೆಯಿತು?
ಮಂಗಳವಾರ ಸಂಜೆ ಎಂದಿನಂತೆ ರತ್ನಮ್ಮ ತೋಟಕ್ಕೆ ವಾಕಿಂಗ್ಗೆ ತೆರಳಿದ್ದರು. ಆದರೆ, ರಾತ್ರಿ ಆದರೂ ಮನೆಗೆ ವಾಪಸ್ ಬಾರದೇ ಇದ್ದ ಕಾರಣ ಕುಟುಂಬಸ್ಥರಿಗೆ ಅನುಮಾನ ಮೂಡಿದೆ.
ಸೊಸೆ ಭಾಗ್ಯಮ್ಮ ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದ ವೇಳೆ, ಮನೆಯಿಂದ ಸುಮಾರು ಒಂದು ಕಿಲೋಮೀಟರ್ ದೂರದ ತೋಟದ ಮನೆಯ ಬಳಿ ರತ್ನಮ್ಮ ಅವರ ಮೃತದೇಹ ಪತ್ತೆಯಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ರತ್ನಮ್ಮ ಅವರ ಕೈಕಾಲುಗಳನ್ನು ಕಟ್ಟಿ, ಬಾಯಿಗೆ ಬಟ್ಟೆ ಸುತ್ತಿ ಹತ್ಯೆ ಮಾಡಲಾಗಿದೆ. ಮೈಮೇಲಿದ್ದ ಚಿನ್ನಾಭರಣಗಳಿಗಾಗಿ ಈ ಕೃತ್ಯ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಪೊಲೀಸರ ತನಿಖೆ ಆರಂಭ
ಘಟನೆ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.
MUST WATCH : ನಿರ್ಮಾಣ ಹಂತದ ಕ್ರೀಡಾಂಗಣದಲ್ಲಿ ದುರಂತ ಲಿಫ್ಟ್ ನ ಗುಂಡಿಗೆ ಬಿದ್ದು ಪುಟ್ಟ ಕಂದಮ್ಮ ಸಾ**




