ಇಂದು ಆಗ್ನೇಯ ಪದವೀಧರರ ಕ್ಷೇತ್ರದ ಮತದಾನ – ಮತದಾನ ಪ್ರಕ್ರಿಯೆಗೆ TUMAKURU ಜಿಲ್ಲಾಡಳಿತ ಸಕಲ ತಯಾರಿ

ಇಂದು ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ತುಮಕೂರು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಬೆಳಗ್ಗೆ 8 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.
80 ಮತಗಟ್ಟೆಗಳಲ್ಲಿ ಮತದಾನಕ್ಕೆ ಅವಕಾಶ
ಇನ್ನು ಜಿಲ್ಲೆಯಾದ್ಯಂತ ಒಟ್ಟು 80 ಮತಗಟ್ಟೆಗಳಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಚುನಾವಣೆಯಲ್ಲಿ ತುಮಕೂರು ಜಿಲ್ಲೆಯ 50,060 ಪದವೀಧರ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮತದಾನ ಪ್ರಕ್ರಿಯೆ ಸುಸೂತ್ರವಾಗಿ ನಡೆಯಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಚುನಾವಣಾ ಕಾರ್ಯಕ್ಕಾಗಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
READ THIS : ವಿಧಾನ ಪರಿಷತ್ 4 ಕ್ಷೇತ್ರಗಳಲ್ಲಿ ಚುನಾವಣೆ – ಯಾರಿಗೆ ವಿಜಯದ ಮಾಲೆ?

ಬಿಗಿ ಪೊಲೀಸ್ ಬಂದೋಬಸ್ತ್ !
ಮತದಾನ ಕೇಂದ್ರಗಳ ಸುತ್ತಮುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶಾಂತಿಯುತ ಮತದಾನ ನಡೆಸಲು ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಶೈಕ್ಷಣಿಕ ಕ್ಷೇತ್ರದ ಪ್ರತಿನಿಧಿಯನ್ನು ಆಯ್ಕೆ ಮಾಡುವ ಮಹತ್ವದ ಚುನಾವಣೆಯಲ್ಲಿ ಪದವೀಧರ ಮತದಾರರು ತಮ್ಮ ಹಕ್ಕು ಚಲಾಯಿಸಲು ಸಜ್ಜಾಗಿದ್ದಾರೆ.
ಇನ್ನು ಈ ಚುನಾವಣಾ ಕಣದಲ್ಲಿ ಒಟ್ಟು 10 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ನಿಂದ ಶಶಿ ಹುಲಿಕುಂಟೆ ಮಠ್ ಹಾಗೂ ಬಿಜೆಪಿಯಿಂದ ದಾವಣಗೆರೆಯ ಕೆ.ಎಂ.ಸುರೇಶ್ ಕಣದಲ್ಲಿದ್ದಾರೆ.

TUMAKURU – ಶಶಿ ಹುಲಿಕುಂಟೆ ಮಠ್ ಅವರಿಂದ ಮತಗಟ್ಟೆಗಳ ವೀಕ್ಷಣೆ
ಅಗ್ನೇಯ ಪದವೀಧರರ ಕ್ಷೇತ್ರದ ಮತದಾನ ಪ್ರಕ್ರಿಯೆ ಹಿನ್ನೆಲೆ ಮತಗಟ್ಟೆಗಳಿಗೆ ಪದವೀಧರರು ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇದೇ ವೇಳೆ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಅವರು ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುಮಕೂರಿನ ಸಿದ್ದಗಂಗಾ ಪಿಯು ಕಾಲೇಜಿನ ಮತಗಟ್ಟೆಗೆ ಭೇಟಿ ನೀಡಿದ ಶಶಿ ಹುಲಿಕುಂಟೆ ಮತದಾನ ಚಲಾಯಿಸಿದ್ರು.

MUST WATCH : ವಿಧಾನ ಪರಿಷತ್ ಮಹಾಸಮರ – CONGRESSಗೆ ಪ್ರತಿಷ್ಠೆ NDAಗೆ ಸವಾಲು




