Tumkur Murder ತುಮಕೂರಿನಲ್ಲಿ ಯುವಕನ ಬರ್ಬರ ಹತ್ಯೆ.!

Tumkur Murder ತುಮಕೂರು ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ನಗರದ ಹೆಗ್ಗಡೆ ಕಾಲೋನಿ ಬಿ ಬ್ಲಾಕ್ ರಸ್ತೆಯಲ್ಲಿ ರಾತ್ರಿ ಸ್ನೇಹಿತರ ಜೊತೆ ಮಾತನಾಡುತ್ತಾ ನಿಂತಿದ್ದ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ತುಮಕೂರಿನಲ್ಲಿ ಯುವಕನ ಬರ್ಬರ Murder.!
ಮೃತನನ್ನು 21 ವರ್ಷದ ಸೈಯದ್ ಸುಹೇಲ್ ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು 11.30ರ ವೇಳೆಯಲ್ಲಿ ಸ್ನೇಹಿತರ ಜೊತೆ ಮಾತನಾಡುತ್ತಿದ್ದ ವೇಳೆ ರಬ್ಬನ್ ಎಂಬಾತನ ಜೊತೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದೆ. ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ರಬ್ಬನ್ ಚಾಕುವಿನಿಂದ ಸೈಯದ್ ಸುಹೇಲ್ಗೆ ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ.
ಚಾಕು ಇರಿತದಿಂದ ತೀವ್ರ ರಕ್ತಸ್ರಾವವಾಗಿ ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಸೈಯದ್ ಸುಹೇಲ್ನನ್ನು ಸ್ನೇಹಿತರು ಕೂಡಲೇ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸೈಯದ್ ಸುಹೇಲ್ ಮೃತಪಟ್ಟಿದ್ದಾನೆ.
ಇದನ್ನೂ ಓದಿ : ಲಾರಿಗೆ ಬೊಲೆರೋ ಗೂಡ್ಸ್ ಡಿಕ್ಕಿ; ಇಬ್ಬರು ಸಾವು.!

ಸದ್ಯ ಘಟನೆ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಮಾಡಿ ನಾಪತ್ತೆಯಾಗಿದ್ದ ಆರೋಪಿ ರಬ್ಬನ್ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆದರೆ ಆಸ್ಪತ್ರೆ ಬಳಿ ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
MUST WATCH : ತುಮಕೂರು ಹೊರವಲಯದ ಹೈವೇಯಲ್ಲಿ ಆಕ್ಸಿಡೆಂ* – ಇಬ್ಬರು ಸ್ಥಳದಲ್ಲೇ ಸಾ*.. ವಾಹನಗಳು ಜಖಂ




