Accident : ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ – ಸ್ಥಳದಲ್ಲೇ ಸವಾರರು ಸಾವು

ಅವರಿಬ್ಬರು ಕಷ್ಟ ಪಟ್ಟು ದುಡಿದು, ಮನೆಯ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದರು. ಆದ್ರೆ ಆ ಇಬ್ಬರು ಯುವಕರ ಬಾಳಲ್ಲಿ ವಿಧಿ ಅಟ್ಟಹಾಸ ಮೆರೆದಿದ್ದು ಬೈಕ್ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಡಿಕ್ಕಿ ರಭಸಕ್ಕೆ ಇಬ್ಬರು ಸವಾರರು ಸ್ಥಳದಲ್ಲೇ ಸಾವು
ಶ್ರೀನಿವಾಸ್ ಹಿಂದುಸ್ತಾನ್ ಲಿಮಿಟೆಡ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕರು, ಸೆಕೆಂಡ್ ಶಿಫ್ಟ್ ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಭೀಕರ Accident ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಗೇಟ್ ಬಳಿ ನಡೆದಿದೆ.

ಚಿಕ್ಕಬಳ್ಳಾಪುರದಲ್ಲಿ ಹಿಟ್ & ರನ್
ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಟ್ ಅಂಡ್ ರನ್ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಅಪರಿಚಿತ ವಾಹನ ಬೈಕ್ಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಬೈಕ್ ಸವಾರರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಅಪಘಾತ ಸಂಭವಿಸಿದ ಕೂಡಲೇ ಅಪರಿಚಿತ ವಾಹನ ಸವಾರ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಮೃತ ಬೈಕ್ ಸವಾರರನ್ನು ಚಿಕ್ಕಬಳ್ಳಾಪುರ ತಾಲ್ಲೂಕಿನ ಬೊದಗಾನಹಳ್ಳಿ ಗ್ರಾಮದ ವರುಣ್ , ಹಾಗೂ ಕುಣಿಗಲ್ ಮೂಲದ ಜೀವನ್ ಎಂದು ಗುರುತಿಸಲಾಗಿದೆ.

ಯುವಕ ಅಗಲಿಗೆ ಕುಟುಂಬ ಕಂಗಾಲು
ಇನ್ನು ಅಪಘಾತದದಲ್ಲಿ ಮೃತಪಟ್ಟಿರುವ ಕುಣಿಗಲ್ ಮೂಲದ ಜೀವನ್ಗೆ ತಂದೆ ಇಲ್ಲದ ತಬ್ಬಲಿಯಾಗಿದ್ದು, ಕೆಲಸಕ್ಕಾಗಿ ಚಿಕ್ಕಬಳ್ಳಾಪುರಕ್ಕೆ ಬಂದಿದ್ದ. ತಂದೆ ಇಲ್ಲದಿರೋದ್ರಿಂದ ಜೀವನ್ನೇ ಕುಟುಂಬಕ್ಕೆ ಆಧಾರವಾಗಿದ್ದ. ಆದ್ರೀಗ ಮನೆಯ ಮಗನೂ ಕೂಡ ಅಪಘಾತದಿಂದ ಸಾವನ್ನಪ್ಪಿದ್ದು ಕುಟುಂಬಕ್ಕೆ ಬರಸಿಡಿಲೇ ಬಡಿದಂತಾಗಿದೆ. ಮನೆ ಮಗನನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಇದನ್ನು ಓದಿ : ಕಿಲ್ಲರ್ BMTC ಗೆ ಒಂದೇ ಕುಟುಂಬದ ಮೂವರು ಬಲಿ..!!

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಅಪಘಾತ ಮಾಡಿದ ಅಪರಿಚಿತ ವಾಹನಕ್ಕಾಗಿ ಹುಡುಕಾಟ ಮುಂದುವರೆಸಿದ್ದಾರೆ.

ಇದನ್ನು ನೋಡಿ : ಬಲವಂತಕ್ಕೆ ತಾಳಿ ಕಿತ್ತೆಸೆದು ಹೋಗಿದ್ದ ಯುವತಿ ಕೊನೆಗೆ ಬಡ ಪ್ರೇಮಿಯನ್ನ ಹುಡುಕಿಕೊಂಡು ಬಂದ್ಳು




