Belagavi : ಯರಗಟ್ಟಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಸಹೋದರರ ಹತ್ಯೆ

Belagavi ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಸಹೋದರರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ನಡೆದಿದ್ದೇನು..?
ಲಗಮಪ್ಪ ರಾಮಣ್ಣವರ (32) ಹಾಗೂ ಬಸಪ್ಪ ರಾಮಣ್ಣವರ (38) ಕೊಲೆಯಾದ ದುರ್ದೈವಿಗಳು. ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿ ಸಹೋದರ ಸಂಬಂಧಿಕರ ನಡುವೆ ನಡೆದ ಜಗಳವು ತೀವ್ರ ಸ್ವರೂಪ ಪಡೆದು, ಸುಮಾರು 6 ಜನರು ಸೇರಿ ಹಲ್ಲೆ ನಡೆಸಿ ಇಬ್ಬರನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಇದನ್ನು ಓದಿ : ಲಿವ್ ಇನ್ ರಿಲೇಶನ್ಶಿಪ್ ನಲ್ಲಿದ್ದ ಜೋಡಿಯಿಂದ 2 ವರ್ಷದ ಮಗುವಿನ ಹತ್ಯೆ?

Belagavi Murder – ಪ್ರಕರಣ ದಾಖಲು
ಇನ್ನು ಘಟನೆ ಸಂಬಂಧ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆ ಹಾಗೂ ಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಘಟನಾ ಸ್ಥಳಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಹೆಚ್ಚುವರಿ ಎಸ್ಪಿ ಬಸರಗಿ, ಮುರಗೋಡ ಸಿಪಿಐ ಐ. ಎಂ. ಮಠಪತಿ ಹಾಗೂ ಪಿಎಸ್ಐ ಎಲ್. ಬಿ. ಮಾಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನು ನೋಡಿ : ನೇಮಕಾತಿಯಲ್ಲಿ ಅನ್ಯಾಯ ಆರೋಪ – ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ




