Udupi ಯ ಬ್ರಹ್ಮಾವರ ತಾಲೂಕಿನ ಹೆರಂಜಾಲು ಗ್ರಾಮದಲ್ಲಿ ತಾಯಿ ಮಡಿಲಲ್ಲಿದ್ದ ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ದಾರುಣವಾಗಿ ಮೃತಪಟ್ಟಿದೆ.

Udupi ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತಾರು ಹೆರಂಜಾಲು ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ತಾಯಿಯ ಮಡಿಲಲ್ಲಿದ್ದ ಒಂದೂವರೆ ವರ್ಷದ ಕಂದಮ್ಮನ ಮೇಲೆ ತೆಂಗಿನಕಾಯಿ ಬಿದ್ದು, ಗಂಭೀರವಾಗಿ ಗಾಯಗೊಂಡ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಈ ದುರ್ಘಟನೆ ಇಡೀ ಗ್ರಾಮವನ್ನು ಶೋಕಸಾಗರದಲ್ಲಿ ಮುಳುಗಿಸಿದೆ.
ಮೃತ ಮಗುವನ್ನು ದಕ್ಷ ಎಂದು ಗುರುತಿಸಲಾಗಿದ್ದು, ಪ್ರಶಾಂತ್ ಮತ್ತು ಸುಚಿತ್ರಾ ದಂಪತಿಯ ಎರಡನೇ ಪುತ್ರನಾಗಿದ್ದ. ತಾಯಿ ಮಗುವನ್ನು ಮಡಿಲಲ್ಲಿ ಮಲಗಿಸಿಕೊಂಡು ಮನೆಯ ಸಮೀಪದ ತೆಂಗಿನಮರದ ಕೆಳಗೆ ಕುಳಿತಿದ್ದ ವೇಳೆ, ಏಕಾಏಕಿ ಮರದಿಂದ ತೆಂಗಿನಕಾಯಿ ಉದುರಿದ್ದು, ಅದು ಮಗುವಿನ ತಲೆಗೆ ಬಡಿದಿದೆ. ಪರಿಣಾಮ ಕಂದಮ್ಮ ಗಂಭೀರವಾಗಿ ಗಾಯಗೊಂಡಿದ್ದಾನೆ.
MUST READ : Gold & Silver Rate : ಇಂದು ಕರ್ನಾಟಕ ಸೇರಿ ದೇಶಾದ್ಯಂತ ಚಿನ್ನ, ಬೆಳ್ಳಿ ಬೆಲೆ ಎಷ್ಟು…?
ಘಟನೆಯ ತಕ್ಷಣ ಸ್ಥಳೀಯರ ನೆರವಿನಿಂದ ಮಗುವನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ವೈದ್ಯರ ಎಲ್ಲಾ ಪ್ರಯತ್ನಗಳ ನಡುವೆಯೂ ಮಗುವಿನ ಜೀವ ಉಳಿಸಲು ಸಾಧ್ಯವಾಗದೆ, ಚಿಕಿತ್ಸೆ ವೇಳೆ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ಒಂದೂವರೆ ವರ್ಷದ ಕಂದಮ್ಮನ ಅಕಾಲಿಕ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಹೆರಂಜಾಲು ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಈ ದುರ್ಘಟನೆಗೆ ಗ್ರಾಮಸ್ಥರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಘಟನೆ ಕುರಿತು ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.
MUST WATCH : ರಸ್ತೆಗಾಗಿ ಚರಂಡಿ ಮುಚ್ಚಿ ಅವಾಂತರ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ.




