ವಿಧಾನ ಪರಿಷತ್ನ ನೂತನ ಉಪ ಸಭಾಪತಿಯಾಗಿ Umashree ಆಯ್ಕೆ

ಕರ್ನಾಟಕ ವಿಧಾನ ಪರಿಷತ್ತಿನ ನೂತನ ಉಪ ಸಭಾಪತಿಯಾಗಿ ಹಿರಿಯ ನಟಿ ಹಾಗೂ ಪರಿಷತ್ ಸದಸ್ಯೆ ಉಮಾಶ್ರೀ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಉಪ ಸಭಾಪತಿ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪರಿಷತ್ ಸದಸ್ಯರು ಉಮಾಶ್ರೀ ಅವರ ಹೆಸರನ್ನು ಸೂಚಿಸಿದ್ದು, ಸದನದ ಎಲ್ಲ ಸದಸ್ಯರ ಒಮ್ಮತದ ಬೆಂಬಲದೊಂದಿಗೆ ಅವರು ನೂತನ ಉಪ ಸಭಾಪತಿಯಾಗಿ ಆಯ್ಕೆಯಾದರು.
ಸಚಿವ ಸ್ಥಾನಕ್ಕಿಂತಲೂ ಉನ್ನತವಾದ ಜವಾಬ್ದಾರಿ
ಉಪ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ್ದ Umashree ಅವರು, ಸಚಿವ ಸ್ಥಾನ ಪಡೆಯುವ ಆಕಾಂಕ್ಷೆ ತಮ್ಮಲ್ಲೂ ಇತ್ತು ಎಂದು ಹೇಳಿಕೊಂಡಿದ್ದರು. ಆದರೆ ಕಾಂಗ್ರೆಸ್ ಪಕ್ಷ ತಮಗೆ ಸಚಿವ ಸ್ಥಾನಕ್ಕಿಂತಲೂ ಉನ್ನತವಾದ ಸಾಂವಿಧಾನಿಕ ಜವಾಬ್ದಾರಿಯನ್ನು ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದ್ದರು.
“ನನಗೂ ಸಹಜವಾಗಿ ರಾಜ್ಯ ಸಚಿವ ಸಂಪುಟದಲ್ಲಿ ಸಚಿವೆ ಆಗುವ ಆಕಾಂಕ್ಷೆ ಇತ್ತು. ಆದರೆ, ನಮ್ಮ ಕಾಂಗ್ರೆಸ್ ಪಕ್ಷ ನನಗೆ ಸಚಿವ ಸ್ಥಾನಕ್ಕಿಂತಲೂ ಅತ್ಯಂತ ಉನ್ನತವಾದ ಸಾಂವಿಧಾನಿಕ ಸ್ಥಾನವನ್ನು ಗೌರವದಿಂದ ನೀಡಿದೆ. ಹಾಗಾಗಿ ನನಗೆ ಈ ಸ್ಥಾನ ಸಿಕ್ಕಿದ್ದಕ್ಕೆ ಅತ್ಯಂತ ತೃಪ್ತಿಯಿದೆ.”

READ THIS : ಈಡೇರದ ಸಚಿವ ಸ್ಥಾನದ ಕನಸು – ಉಮಾಶ್ರೀಗೆ ಉಪಸಭಾಪತಿ ಸ್ಥಾನ ಫಿಕ್ಸ್!ʼ
ಪಕ್ಷದ ನಾಯಕರಿಗೆ ಉಮಾಶ್ರೀ ಧನ್ಯವಾದ
ಮಹತ್ವದ ಜವಾಬ್ದಾರಿ ನೀಡಿದ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕರಿಗೆ ಉಮಾಶ್ರೀ ಅವರು ಧನ್ಯವಾದ ಸಲ್ಲಿಸಿದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿ.ಕೆ. ಹರಿಪ್ರಸಾದ್ ಹಾಗೂ ಮುಖ್ಯಮಂತ್ರಿ ಸೇರಿದಂತೆ ಪಕ್ಷದ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು.
“ಪಕ್ಷ ಮತ್ತು ಸದನ ನನ್ನ ಮೇಲಿಟ್ಟಿರುವ ನಿರೀಕ್ಷೆಗೆ ತಕ್ಕಂತೆ ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಿಕೊಂಡು ಹೋಗುತ್ತೇನೆ” ಎಂದು ಭರವಸೆ ನೀಡಿದರು.

MUST WATCH : ತುಮಕೂರಲ್ಲಿ ಹೃದಯ ವಿದ್ರಾವಕ ಘಟನೆ – ರಸ್ತೆಯಲ್ಲಿ ನವಜಾತ ಶಿಶುವಿನ ಶ* ಪತ್ತೆ!




