Uttara Kannada ಜಿಲ್ಲೆಯ ಜೋಯಿಡಾ ತಾಲೂಕಿನ ಚಾಪಾಲಿ ಗವಳಿವಾಡದಲ್ಲಿ 13 ವರ್ಷದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ.

Uttara Kannada ಜಿಲ್ಲೆಯ ಜೋಯಿಡಾ ತಾಲೂಕಿನ ಚಾಪಾಲಿ ಗವಳಿವಾಡದಲ್ಲಿ 13 ವರ್ಷದ ಗಂಗುಕವಳಿ ಎಂಬ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. ಈ ಘಟನೆ ಗ್ರಾಮದಲ್ಲಿ ದುಃಖದ ವಾತಾವರಣ ಸೃಷ್ಟಿಸಿದೆ.
ಮೃತ ವಿದ್ಯಾರ್ಥಿನಿಗೆ ಯಾವುದೇ ರೀತಿಯ ಕಾಯಿಲೆಗಳು ಇರಲಿಲ್ಲ ಎಂದು ತಿಳಿದುಬಂದಿದೆ. ಹೃದಯ ಸಂಬಂಧಿ ಸಮಸ್ಯೆಗಳ ಲಕ್ಷಣಗಳೂ ಕಾಣಿಸಿಕೊಂಡಿರಲಿಲ್ಲ. ಗಂಗುಕವಳಿ ಇತರ ಮಕ್ಕಳಂತೆ ಪ್ರತಿದಿನ ಆಟಪಾಠಗಳಲ್ಲಿ ತೊಡಗಿಸಿಕೊಂಡಿದ್ದಳು.
MUST READ : CSK vs MI : ಇದು ನಮ್ಮ ಸೀಸನ್ ಅಲ್ಲ – ದುಃಖಿತರಾದ ಹಾರ್ದಿಕ್ ಪಾಂಡ್ಯ..!!

ಸಾವಿಗೂ ಹಿಂದಿನ ದಿನ ಸಂಜೆಯವರೆಗೂ ಆಟವಾಡಿ ಸಂತೋಷದಿಂದಿದ್ದಳು. ಆದರೆ, ಮರುದಿನ ಬೆಳಗ್ಗೆ ಏಕಾಏಕಿ ವಾಂತಿ ಮಾಡಿದ ಕೆಲವೇ ಕ್ಷಣಗಳಲ್ಲಿ ಆಕೆ ಅಸುನೀಗಿದ್ದಾಳೆ. ಈ ಅಪ್ರತೀಕ್ಷಿತ ಘಟನೆ ಕುಟುಂಬಸ್ಥರು ಮತ್ತು ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ.
ಈ ಕುರಿತು ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕಿಯ ಅಕಾಲಿಕ ಮರಣಕ್ಕೆ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.
MUST WATCH : ಸಿದ್ಧಗಂಗಾ ಮಠಕ್ಕೆ VIJAYENDRA VISIT – BSY ಅಭಿಮಾನೋತ್ಸವಕ್ಕೆ ಭರ್ಜರಿ ಸಿದ್ಧತೆ..!




