Bengaluru ನಗರದಲ್ಲಿ ಧಾರಾಕಾರ ಮಳೆಯ ಅಬ್ಬರದಿಂದ ರಸ್ತೆಗಳಲ್ಲಿ ನೀರು ನುಗ್ಗಿ, ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

Bengaluru ನಗರದಲ್ಲಿ ಮಳೆರಾಯ ಮತ್ತೆ ತನ್ನ ಅಬ್ಬರ ತೋರಿಸಿದ್ದಾನೆ. ಸಂಜೆ ಜಿಟಿಜಿಟಿಯಾಗಿ ಆರಂಭವಾದ ಮಳೆ ಕೆಲವೇ ಕ್ಷಣಗಳಲ್ಲಿ ಜೋರಾದ ಗಾಳಿ ಸಹಿತ ಧಾರಾಕಾರ ಮಳೆಯಾಗಿ ಪರಿವರ್ತನೆಯಾಯಿತು. ಟೌನ್ ಹಾಲ್, ಮೆಜೆಸ್ಟಿಕ್, ಮಾರ್ಕೆಟ್ ಹಾಗೂ ವಿಧಾನಸೌಧ ಸುತ್ತಮುತ್ತ ಭಾರಿ ಮಳೆಯಾಗಿದ್ದು ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.
MUST READ : Dina Bhavishya : 2026 ಮೇ 26ರ ಮಂಗಳವಾರದ ದಿನ ಭವಿಷ್ಯ..

ಗಾಳಿ ಸಹಿತ ಮಳೆಯಿಂದಾಗಿ ನಮ್ಮ ಮೆಟ್ರೋ ಹಳಿಯ ಮೇಲೆ ಮರದ ಕೊಂಬೆ ಬಿದ್ದ ಘಟನೆ ನಡೆದಿದೆ. ಇದರ ಪರಿಣಾಮ ವೈಟ್ಫೀಲ್ಡ್ ಮತ್ತು ಗರುಡಾಚಾರ್ ಪಾಳ್ಯ ನಡುವೆ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿತು. ಐಟಿಪಿಎಲ್ ಮತ್ತು ಸತ್ಯಸಾಯಿ ಪ್ರದೇಶಗಳ ನಡುವೆ ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ಕೆಲಕಾಲ ತೊಂದರೆ ಅನುಭವಿಸಿದರು.

ಭಾರಿ ಮಳೆಯ ಕಾರಣ ರಸ್ತೆಯ ದೃಶ್ಯತೆ ಕಡಿಮೆಯಾಗಿ ಹಲವು ಅಪಘಾತದಂತಹ ಪರಿಸ್ಥಿತಿಗಳು ಉಂಟಾಗಿವೆ. ಪೂರ್ಣಿಮಾ ಥಿಯೇಟರ್ ಬಳಿ ರಸ್ತೆ ಕಾಣದ ಕಾರಣ ಚಾಲಕನೊಬ್ಬ ಡಿವೈಡರ್ ಮೇಲೆ ಕಾರು ಹತ್ತಿಸಿದ ಘಟನೆ ನಡೆದಿದೆ. ನಂತರ ಕಾರನ್ನು ಹೊರತೆಗೆಯಲು ಸಾಕಷ್ಟು ಹರಸಾಹಸ ಪಡಬೇಕಾಯಿತು.
ನಗರದ ಹಲವೆಡೆ ನಿರಂತರ ಮಳೆಯಿಂದ ರಸ್ತೆಗಳು ಕೆರೆಯಂತಾಗಿ ನೀರಿನಿಂದ ತುಂಬಿಕೊಂಡಿವೆ. ಇದರಿಂದ ದ್ವಿಚಕ್ರ ವಾಹನ ಸವಾರರು, ಆಟೋ ಚಾಲಕರು ಹಾಗೂ ಕಾರು ಚಾಲಕರು ತೀವ್ರ ತೊಂದರೆ ಅನುಭವಿಸಿದ್ದಾರೆ. ಪೀಣ್ಯಾ, ದಾಸರಹಳ್ಳಿ, ಬಾಗಲಗುಂಟೆ ಮತ್ತು ಬಾಣಾವರ ಭಾಗಗಳಲ್ಲೂ ಧಾರಾಕಾರ ಮಳೆ ಸುರಿದಿದ್ದು ಸಂಚಾರ ಅಸ್ತವ್ಯಸ್ತವಾಗಿದೆ.

ಶಿವಾನಂದ ಸರ್ಕಲ್ ಬಳಿ ಇರುವ ಬೆಂಗಳೂರು ಕೆಫೆಗೆ ಮಳೆ ನೀರು ನುಗ್ಗಿ ವ್ಯಾಪಾರ ಚಟುವಟಿಕೆಗಳಿಗೆ ತೊಂದರೆ ಉಂಟಾಗಿದೆ. ಇನ್ನು ಹವಾಮಾನ ಇಲಾಖೆ ಮುಂದಿನ ಮೂರು ಗಂಟೆಗಳ ಕಾಲ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಸಂಚಾರ ಮಾಡುವಂತೆ ಸೂಚಿಸಲಾಗಿದೆ.
MUST WATCH : DELHIಯಲ್ಲಿ CONGRESS MARATHAN MEETING – DKS ಫುಲ್ ಗರಂ ಆಗಿದ್ದು ಯಾಕೆ?



