ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ, ಹಿರಿಯ ನಟಿ Shailaja Srishailan ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ (Shailaja Srishailan) ಅವರು ವಯೋಸಹಜ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಮಧ್ಯಾಹ್ನ ಸುಮಾರು 2 ಗಂಟೆಗೆ ಬೆಂಗಳೂರಿನ ವೈಯ್ಯಾಲಿಕಾವಲ್ನಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದರು.
ಗಣ್ಯರು ಸಂತಾಪ
ಹಿರಿಯ ನಟ ಶ್ರೀಶೈಲನ್ ಅವರ ಧರ್ಮಪತ್ನಿಯಾಗಿದ್ದ ಶೈಲಜಾ ಶ್ರೀಶೈಲನ್ ಅವರು ಪುತ್ರ ಶ್ರೀಕಾಂತ್ ಹಾಗೂ ಪುತ್ರಿ ಶ್ರೀವಾಣಿ ಅವರನ್ನು ಅಗಲಿದ್ದಾರೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚಿತ್ರರಂಗದ ಗಣ್ಯರು, ಸಹನಟರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ಇದನ್ನು ಓದಿ : ಖ್ಯಾತ ಪತ್ರಕರ್ತ ಪಿ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ನಿಧನ!
ಹಲವು ಚಿತ್ರಗಳಲ್ಲಿ ಅಭಿನಯ
ಶೈಲಜಾ ಶ್ರೀಶೈಲನ್ ಅವರು ‘ಎ’, ‘ಪುಟ್ಟ ಹೆಂಡ್ತಿ’, ‘ಗೃಹಪ್ರವೇಶ’, ‘ಬಾರೆ ನನ್ನ ಮುದ್ದಿನ ರಾಣಿ’, ‘ಅನಂತನ ಅವಾಂತರ’, ‘ಉಪ್ಪಿ 2’ ಸೇರಿದಂತೆ ನೂರಾರು ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿ ತಮ್ಮದೇ ಆದ ಛಾಪು ಮೂಡಿಸಿದ್ದರು. ವಿಶೇಷವಾಗಿ ನಟ ಉಪೇಂದ್ರ ಅಭಿನಯದ ಹಲವು ಚಿತ್ರಗಳಲ್ಲಿ ತಾಯಿ ಸೇರಿದಂತೆ ಪ್ರಮುಖ ಪಾತ್ರಗಳನ್ನು ನಿರ್ವಹಿಸಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದರು.
Shailaja Srishailan – ಧಾರವಾಹಿಗಳಲ್ಲೂ ಅಭಿನಯ
ಬೆಳ್ಳಿ ಪರದೆ ಮಾತ್ರವಲ್ಲದೆ ‘ಮುಕ್ತ’, ‘ಮಾಯಾಮೃಗ’ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳಲ್ಲೂ ಅಭಿನಯಿಸಿ ಕನ್ನಡ ಕಿರುತೆರೆಯಲ್ಲೂ ಗಮನಾರ್ಹ ಸೇವೆ ಸಲ್ಲಿಸಿದ್ದರು. ಅವರ ಸಹಜ ಅಭಿನಯ ಮತ್ತು ಸರಳ ವ್ಯಕ್ತಿತ್ವದಿಂದ ಕನ್ನಡ ಚಿತ್ರರಂಗದಲ್ಲಿ ವಿಶಿಷ್ಟ ಸ್ಥಾನವನ್ನು ಪಡೆದಿದ್ದರು. ಇಂದು ಬೆಂಗಳೂರಿನ ಶ್ರೀರಾಂಪುರದ ವಿದ್ಯುತ್ ಚಿತಾಗಾರದಲ್ಲಿ ಮೃತರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗಿ
ಇದನ್ನು ನೋಡಿ : ನೇಮಕಾತಿಯಲ್ಲಿ ಅನ್ಯಾಯ ಆರೋಪ – ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ




