ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಹುದ್ದೆ ಹಾಗೂ ಶಾಸಕ ಸ್ಥಾನಕ್ಕೆ MK Pranesh ರಾಜೀನಾಮೆ

ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಎಂ.ಕೆ. ಪ್ರಾಣೇಶ್ (MK Pranesh) ಅವರು ತಮ್ಮ ಉಪಸಭಾಪತಿ ಹುದ್ದೆ ಹಾಗೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆಯನ್ನು ತಕ್ಷಣವೇ ಅಂಗೀಕರಿಸುವಂತೆ ಮನವಿ
ಇಂದು (ಆಗಸ್ಟ್ 1, 2026) ಎಂ.ಕೆ. ಪ್ರಾಣೇಶ್ ಅವರು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದು, ತಮ್ಮ ರಾಜೀನಾಮೆಯನ್ನು ತಕ್ಷಣವೇ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ.
ಇದನ್ನು ಓದಿ : Congress ಗೆ ಶಾಕ್, ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

ರಾಜೀನಾಮೆ ಪತ್ರದಲ್ಲಿ ಏನಿದೆ?
ಕರ್ನಾಟಕ ವಿಧಾನ ಪರಿಷತ್ತಿನ ಉಪ ಸಭಾಪತಿ ಹುದ್ದೆ ಮತ್ತು ಶಾಸಕ ಸ್ಥಾನಕ್ಕೆ ನಾನು ಸ್ವ-ಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದು, ಸದರಿ ರಾಜೀನಾಮೆ ಪತ್ರವನ್ನು ಅಂಗೀಕರಿಸುವಂತೆ ತಮ್ಮನ್ನು ಕೋರುತ್ತೇನೆ,” ಎಂದು ಎಂ.ಕೆ. ಪ್ರಾಣೇಶ್ ಅವರು ಸಭಾಪತಿಯವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
MK Pranesh ಅವರ ರಾಜೀನಾಮೆಗೆ ಕಾರಣವೇನು..?
ಶುಕ್ರವಾರ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ನಡೆದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ 9 ಮತಗಳ ಅಂತರದಿಂದ ಜಯಗಳಿಸಿದ್ದ ಹಿನ್ನೆಲೆಯಲ್ಲಿ, ಈ ರಾಜೀನಾಮೆ ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ. ರಾಜೀನಾಮೆ ಅಂಗೀಕಾರದ ಬಳಿಕ ಮುಂದಿನ ಸಂವಿಧಾನಾತ್ಮಕ ಪ್ರಕ್ರಿಯೆಗಳು ನಡೆಯಲಿವೆ.

ಇದನ್ನು ನೋಡಿ : ROLL CALL ಖಾತೆಗಳನ್ನ ಬೇಗ ಹಂಚಿಕೊಂಡ್ರು – ಸರ್ಕಾರದ ವಿರುದ್ಧ R.ASHOK ವಾಗ್ದಾಳಿ




