Vijayanagara : ಹಗರಿಬೊಮ್ಮನಹಳ್ಳಿ ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವು; ಠಾಣೆ ಎದುರು ಸಂಬಂಧಿಕರ ಪ್ರತಿಭಟನೆ

Vijayanagara ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಪೊಲೀಸರ ವಶದಲ್ಲಿದ್ದ ವ್ಯಕ್ತಿಯೊಬ್ಬರು ಶನಿವಾರ ರಾತ್ರಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಹರಪನಹಳ್ಳಿಯ ಖಲೀಲ್ (38) ಎಂದು ಗುರುತಿಸಲಾಗಿದೆ. ಖಲೀಲ್ ಅವರು ಹರಪನಹಳ್ಳಿ ನಿವಾಸಿಯಾಗಿದ್ದು, ಹಗರಿಬೊಮ್ಮನಹಳ್ಳಿ ತಾಲೂಕಿನ ನಂದಿಪುರ ಗ್ರಾಮದ ಯುವತಿಯೊಂದಿಗೆ ವಿವಾಹವಾಗಿದ್ದರು. ಪಟ್ಟಣದಲ್ಲಿ ವಾಸವಾಗಿದ್ದ ಅವರು ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಪೋಲೀಸರ ಹಲ್ಲೆಯಿಂದ ಕಸ್ಟಡಿಯಲ್ಲೇ ಆರೋಪಿ ಸಾವು?
ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಪತ್ನಿಯೊಂದಿಗೆ ನಡೆದ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಖಲೀಲ್ ಅವರನ್ನು ಪೊಲೀಸರು ಠಾಣೆಗೆ ಕರೆತಂದಿದ್ದರು. ವಿಚಾರಣೆ ವೇಳೆ ಅವರಿಗೆ ಏಕಾಏಕಿ ಫಿಟ್ಸ್ ಬಂದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲು ಪೊಲೀಸರು ಮುಂದಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ : ಅನುಮಾನಾಸ್ಪದ ರೀತಿಯಲ್ಲಿ 4 ಮಂದಿ ಕೂಲಿ ಕಾರ್ಮಿಕರು ದಾರುಣ ಸಾವು

ಪೊಲೀಸರ ವಿರುದ್ಧ ಕುಟುಂಬಸ್ಥರ ಆರೋಪ
ಪೊಲೀಸರ ಮಾಹಿತಿಯನ್ನು ಮೃತನ ಸಂಬಂಧಿಕರು ತಳ್ಳಿಹಾಕಿದ್ದು, ಪೊಲೀಸರ ಕಿರುಕುಳ ಮತ್ತು ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಖಲೀಲ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಜನರು ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಪ್ರಕರಣದ ಕುರಿತು ನ್ಯಾಯಸಮ್ಮತ ಹಾಗೂ ಪಾರದರ್ಶಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಇದನ್ನು ನೋಡಿ : ಚಿ.ನಾ ಹಳ್ಳಿಯಲ್ಲಿ ರೈತರಿಂದ ಸತ್ಯಾಗ್ರಹ – ರೈತರಿಗೆ ಶಾಸಕ SURESH BABU ಭರವಸೆ




