Vijayanagara : ಮೂವರು ಯುವಕರು ನಾಪತ್ತೆ – ತುಂಗಾಭದ್ರಾ ಹಿನ್ನೀರಿನಲ್ಲಿ ಯುವಕರಿಗಾಗಿ ಶೋಧ.!

ಮೀನು ಹಿಡಿದು ಮನೆಗೆ ವಾಪಸ್ ಬರ್ತೀವಿ ಅಂತ ಹೋಗಿದ್ದ ಮೂವರು ಯುವಕರು ಇದೀಗ ನಾಪತ್ತೆಯಾಗಿದ್ದಾರೆ. ಮೀನು ಹಿಡಿಯಲು ತೆರಳಿದ್ದವರು ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರಲ್ಲಿ ಆತಂಕ ಮನೆಮಾಡಿದ್ದು, ನಾಪತ್ತೆಯಾದವರಿಗಾಗಿ ಪೊಲೀಸರು ಹಾಗೂ ಸ್ಥಳೀಯರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ತುಂಗಭದ್ರಾ ನದಿಯಲ್ಲಿ ಮೂವರು ನಾಪತ್ತೆ
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಳ್ಳಿ ಗ್ರಾಮದ ತುಂಗಭದ್ರಾ ನದಿಯ ಹಿನ್ನೀರಿನಲ್ಲಿ ಈ ಘಟನೆ ನಡೆದಿದೆ. ರಾಜ್, ಯಮನಪ್ಪ ಹಾಗೂ ಅಜ್ಜಪ್ಪ ನಾಪತ್ತೆಯಾಗಿರುವ ಮೀನುಗಾರರು. ನಿನ್ನೆ ಮಧ್ಯಾಹ್ನ ಮೀನು ಹಿಡಿಯಲು ತೆರಳಿದ್ದ ಮೂವರು ಬಳಿಕ ಮನೆಗೆ ವಾಪಸ್ ಬಂದಿಲ್ಲ. ಸಂಜೆಯಾದರೂ ಮೂವರು ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಬಳಿಕ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ತಂಬ್ರಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RAED THIS : ಪೂಜೆಗೆ ನೀರು ತರಲು ಹೋದ ವ್ಯಕ್ತಿ ವರದಾ ನದಿಯಲ್ಲಿ ಮುಳುಗಿ ನಾಪತ್ತೆ

ತುಂಗಾಭದ್ರಾ ಹಿನ್ನೀರಿನಲ್ಲಿ ಯುವಕರಿಗಾಗಿ ಶೋಧ.!
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಹಗರಿಬೊಮ್ಮನಹಳ್ಳಿ ಪೊಲೀಸರು, ಸ್ಥಳೀಯರ ಸಹಕಾರದೊಂದಿಗೆ ನದಿಯ ಹಿನ್ನೀರಿನಲ್ಲಿ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ನೀರಿನ ಆಳ ಹೆಚ್ಚಿರುವ ಹಿನ್ನೆಲೆಯಲ್ಲಿ ಶೋಧ ಕಾರ್ಯ ಸವಾಲಾಗಿ ಪರಿಣಮಿಸಿದ್ದು, SDRF ತಂಡವನ್ನೂ ಕರೆಸಲಾಗಿದೆ. ಮೂವರು ಯುವಕರು ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಕುಟುಂಬಸ್ಥರು ಕಾಯುತ್ತಿದ್ದಾರೆ.

MUST WATCH : ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ವಿಧಿವಶ – ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ


